ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮದುವೆಯಾಗಿ ದೇವಸ್ಥಾನಕ್ಕೆ ಹೊರಟಿದ್ದ ನವವಿವಾಹಿತೆ ಸ್ಥಳದಲ್ಲೇ ಮೃತಪಟ್ಟು, ಆಕೆಯ ಪತಿ ಸೇರಿ ಹಲವರು ಗಂಭೀರ ಗಾಯಗೊಂಡಿರುವ ದುರಂತ ಘಟನೆ ಜರುಗಿದೆ.
ಸಿಂದಗಿ ತಾಲೂಕಿನ ಯರಗಲ್ ಬಿ.ಕೆ. ಗ್ರಾಮದ ಬಳಿ ಟೆಂಪೋ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ನವ ವಿವಾಹಿತೆ ರಾಣಿ ಗಣೇಶ್ ಚವ್ಹಾಣ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಮದುಮಗ ಗಣೇಶ ಚವ್ಹಾಣ ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಎಲ್ಲರನ್ನೂ ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ:ಫೋನ್ ಕದ್ದಾಲಿಕೆ: ಪೊಲೀಸರಿಗೆ ಅರ್ಚಕರ ನಂಬರ್ ನೀಡಿದ್ದ ಅರವಿಂದ್ ಬೆಲ್ಲದ್?
ಮದುವೆ ನಂತರ ಶಂಕರವಾಡಿ ಗ್ರಾಮದಿಂದ ಕೊಕಟನೂರ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಟೆಂಪೋ ಚಾಲಕನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.