Advertisement

ಗೂಡ್ಸ್ ವಾಹನ- ಕಾರು ಮುಖಾಮುಖಿ: ಇಬ್ಬರು ಸ್ಥಳದಲ್ಲೇ ಸಾವು

12:03 PM Jun 30, 2022 | Team Udayavani |

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಚಿತಲಿ ಗ್ರಾಮದ ಬಳಿ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.

Advertisement

ಮೃತರನ್ನು ಆಳಂದ ಪಟ್ಟಣದ ಬಾಳೇನಗಲ್ಲಿ ನಿವಾಸಿ, ಗೂಡ್ಸ್ ಚಾಲಕ ಜಾಫರ್ ಖಾಸೀಂ (27 ವ), ಗುಜರಾತ್ ಮೂಲದ ಉದ್ಯಮಿ, ಕಾರು ಚಲಾಯಿಸುತ್ತಿದ್ದ ಜೋಧಾರಾಮ ಜಸ್ವಂತ್ (40 ವ) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಹೀರಾರಾಮ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಹೈದರಾಬಾದ್‌ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಕೃಷ್ಣಾ ನದಿಯಲ್ಲಿ ಮೊಸಳೆಗೆ ಮತ್ತೊಂದು ಬಲಿ

ಚಾಲಕ ಜಾಫರ್ ಆಳಂದದಿಂದ ಮಹಾರಾಷ್ಟ್ರದ ಉಮರ್ಗಾಕ್ಕೆ ಗೂಡ್ಸ್ ವಾಹನದಲ್ಲಿ ತೆರಳುತ್ತಿದ್ದ. ಗುಜರಾತ್ ಮೂಲದ ವ್ಯಾಪಾರಿಗಳಾದ ಜೋಧಾರಾಮ, ಹೀರಾರಾಮ ಉಮರ್ಗಾದಿಂದ ಕಾರಿನಲ್ಲಿ ಆಳಂದಕ್ಕೆ ಬರುತ್ತಿರುವಾಗ ಘಟನೆ ಸಂಭವಿಸಿದೆ.

Advertisement

ಸ್ಥಳಕ್ಕೆ ಸಿಪಿಐ ಬಾಸು ಚವ್ಹಾಣ್‌, ಪಿಎಸ್‌ಐ ತಿರುಮಲೇಶ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಆಳಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next