Advertisement

ಟಂಟಂ- ಟ್ಯಾಂಕರ್ ನಡುವೆ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಐವರು ಮಹಿಳೆಯರು ಸಾವು

01:37 PM Apr 21, 2021 | Team Udayavani |

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಬಳಿ ಟಂಟಂ ಮತ್ತು ಬೂದಿ ಟ್ಯಾಂಕರ್ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಟಂಟಂನಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಘಟನೆಯಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.

Advertisement

ವಡಗೇರ ತಾಲೂಕಿನ ಮುನಮುಟಗಿ ಗ್ರಾಮದ ಅಯ್ಯಮ್ಮ (60 ವ), ಶರಣಮ್ಮ (40 ವ), ಕಾಸೀಂಬೀ (40 ವ), ಭೀಮಬಾಯಿ (40 ವ) ದೇವಿಂದ್ರಮ್ಮ (70 ವ) ಮೃತಪಟ್ಟ ಮಹಿಳೆಯರು.

ಇವರೆಲ್ಲರೂ ಟಂಟಂ ವಾಹನದಲ್ಲಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು, ಈ ವೇಳೆ ಕೊಳ್ಳೂರು ಬಳಿಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next