ಬೆಳ್ತಂಗಡಿ: ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಸವಣಾಲಿನಲ್ಲಿ ನಡೆದಿದೆ.
Advertisement
ಸವಣಾಲು ಮಸೀದಿ ಬಳಿ ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾಗಿದ್ದು ಈ ವೇಳೆ ಅಳದಂಗಡಿಯ ಕುರ್ದಲಬೆಟ್ಟು ನಿವಾಸಿ ಹೆನ್ರಿ ಡಿಸೋಜಾ (62) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮತ್ತೋರ್ವ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ಕರುಣಾಕರ ಹೆಗ್ಡೆ (60) ಗಂಭೀರ ಗಾಯಗೊಂಡಿದ್ದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.