Advertisement

ಸಾರಿಗೆ ಬಸ್ ಗಳ ಮುಖಾಮುಖಿ ಢಿಕ್ಕಿ: ವಿದ್ಯಾರ್ಥಿಗಳು ಸೇರಿ 68 ಮಂದಿಗೆ ಗಾಯ

01:31 PM Jul 02, 2022 | Team Udayavani |

ಹಾವೇರಿ: ಸಾರಿಗೆ ಸಂಸ್ಥೆಯ ಎರಡು ಬಸ್ ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 68 ಪ್ರಯಾಣಿಕರು ಗಾಯಗೊಂಡ ಘಟನೆ ಶನಿವಾರ ಹಾನಗಲ್ಲ ತಾಲೂಕು ಬೈಚುವಳ್ಳಿ ಗ್ರಾಮದ ಬಳಿ ನಡೆದಿದೆ.

Advertisement

ಬಸ್ ನಲ್ಲಿ ಬೆಳಗ್ಗೆ ಗ್ರಾಮೀಣ ಭಾಗದಿಂದ ಶಾಲೆಗಳಿಗೆ ತೆರಳುತ್ತಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಮಾರ್ಗಮಧ್ಯೆ ಬೈಂಚವಳ್ಳಿ ಕ್ರಾಸ್ ಸಮೀಪ ಬಸ್ ಚಾಲಕರ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.

ಈ ಘಟನೆಯಲ್ಲಿ ಸುಮಾರು 20 ವಿದ್ಯಾರ್ಥಿಗಳು ಸೇರಿದಂತೆ 68 ಪ್ರಯಾಣಿಕರು ಗಾಯಗೊಂಡಿದ್ದರೆ. ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ತೀವ್ರ ಗಾಯಗೊಂಡ ಒಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ, 14 ಜನರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಎರಡೂ ಬಸ್‌ ನ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ:“ಜೀವನವು ಕೊಳಕುಗಳಿಂದ ತುಂಬಿದೆ”.. ಮೂರುವರೆ ವರ್ಷದ ಮಗುವನ್ನು ಕೊಂದು ನೇಣಿಗೆ ಶರಣಾದ ತಾಯಿ

ಸ್ಥಳಕ್ಕೆ ಶಾಸಕ ಶ್ರೀನಿವಾಸ ಮಾನೆ, ಮಾಜಿ ಶಾಸಕ ಶಿವರಾಜ ಸಜ್ಜನರ ಭೇಟಿ ನೀಡಿದರು. ಈ ವೇಳೆ ಕೆಎಸ್ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸೇರಿದಂತೆ ಇತರ ಅಧಿಕಾರಿಗಳು ಇದ್ದರು. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next