Advertisement

ಎರಡು ಕಂಟೈನರ್ ಲಾರಿಗಳ ಡಿಕ್ಕಿ: ಚಾಲಕ ಸಾವು

09:50 AM Oct 16, 2019 | Team Udayavani |

ಚಿತ್ರದುರ್ಗ: ಹೆದ್ದಾರಿಯಲ್ಲಿ ನಿಂತಿದ್ದ ಕಂಟೈನರ್ ಲಾರಿಗೆ ಹಿಂದಿನಿಂದ ಮತ್ತೊಂದು ಕಂಟೈನರ್ ಡಿಕ್ಕಿ ಹೊಡೆದಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Advertisement

ಚಿತ್ರದುರ್ಗ ತಾಲೂಕಿನ ಕ್ಯಾದಿಗೆರೆ ಬಳಿ‌ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಡಿಕ್ಕಿ ಹೊಡೆದ ಲಾರಿಯ ಚಾಲಕ ಮೃತಪಟ್ಟಿದ್ದು, ಗುರುತು ಪತ್ತೆಯಾಗಿಲ್ಲ. ಕ್ಲೀನರ್ ಗೆ ಗಾಯವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next