ಬೆಂಗಳೂರು: ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನಿಜಬಣ್ಣ ಒಂದು ವಾರದಲ್ಲಿಯೇ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಿಡಿ ಕಾರಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮೊದಲ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ ಎಂದು ಹೇಳಿದ್ದ ಈಗಿನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ವರಸೆ ಬದಲಿಸಿ, ಷರತ್ತುಗಳು ಅನ್ವಯ ಎನ್ನುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ರಾಜ್ಯದ ಜನತೆ ವಿದ್ಯುತ್ ಬಿಲ್ ಕಟ್ಟುತ್ತಿಲ್ಲ, ಬಸ್ ಟಿಕೆಟ್ ಪಡೆಯಲು ನಿರಾಕರಿಸುತ್ತಿದ್ದಾರೆ. ಈ ಸರಕಾರ ನುಡಿದಂತೆ ನಡೆಯಬೇಕು. ಮಾತು ತಪ್ಪಿದರೆ ಜನರಿಗೆ ಮೋಸ ಮಾಡಿದಂತಾಗುತ್ತದೆ. ನಾವು ಜನರ ಪರ ನಿಲ್ಲುತ್ತೇವೆ ಎಂದು ಹೇಳಿದರು.
ಎಲ್ಲರಿಗೂ ವಿದ್ಯುತ್ ಉಚಿತ ಎಂದು ಭಾಷಣದಲ್ಲಿ ಹೇಳಿದ್ದರು. ಈಗ ನೋಡಿದರೆ ಅದಕ್ಕೆ ಮಾರ್ಗಸೂಚಿ ರಚನೆ ಆಗಬೇಕು ಎನ್ನುತ್ತಿದ್ದಾರೆ.ಇವರು ಜನರ ಭಾವನೆಗಳ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಹೇಳಿದರು.
Related Articles
ಇಂದು ಆತ್ಮಾವಲೋಕನ ಸಭೆ
ಜೆಡಿಎಸ್ ಸೋಲಿನ ಹಿನ್ನೆಲೆ ಯಲ್ಲಿ ಗುರುವಾರ ಅರಮನೆ ಮೈದಾನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಆತ್ಮಾವಲೋಕನ ಸಭೆ ಹಮ್ಮಿಕೊಳ್ಳಲಾಗಿದೆ.
ಸ್ಪೀಕರ್ ಕೊಠಡಿಯಲ್ಲಿ ಮೂವರ ಪ್ರಮಾಣ
ಜೆಡಿಎಸ್‌ನಿಂದ ಆಯ್ಕೆಯಾಗಿರುವ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಹಾಗೂ ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಅವರು ಬುಧವಾರ ಸ್ಪೀಕರ್ ಕೊಠಡಿಯಲ್ಲಿ ಪ್ರಮಾಣ ಸ್ವೀಕರಿಸಿದರು.