Advertisement

ಶಾಲಾ ಗೋಡೆಗಳಿಗೆ ಬಣ್ಣದ ಚಿತ್ತಾರ

06:00 PM Jul 20, 2022 | Team Udayavani |

ಮಾನ್ವಿ: 75ನೇ ಅಜಾದಿ ಕಾ ಅಮೃತ್‌ ಮಹೋತ್ಸವ ಅಂಗವಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಹಿರಿಯ ಹೋರಾಟಗಾರರ ಸ್ಮರಣೆಗಾಗಿ ಅವರು ವಾಸವಿದ್ದ ಗ್ರಾಮಗಳ ಶಾಲೆಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಸ್ಕೂಲ್‌ ಬೆಲ್‌ 75 ಅಭಿಯಾನದ ಸಂಚಾಲಕ ಗುರುಪ್ರಸಾದ್‌ ಕಡಗದ ತಿಳಿಸಿದರು.

Advertisement

ತಾಲೂಕಿನ ಆಲ್ದಾಳ ಗ್ರಾಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ವತಿಯಿಂದ ರಾಷ್ಟ್ರೀಯ ಸೇವಾ ಯೋಜನಾ ಕೋಶ ವತಿಯಿಂದ ಅಮೃತ್‌ ಮಹೋತ್ಸವದ ಅಂಗವಾಗಿ ರಾಯಚೂರಿನ ಎಸ್‌ಎಲ್‌ಎನ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಂದ ನಡೆದ ಶಾಲಾ ಅಭಿವೃದ್ಧಿ ಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮದ ಸ್ವಾತಂತ್ರ್ಯ ಯೋಧರಾದ ಕಾಶಿರಾವ್‌ ಪಾಟೀಲ್‌ ಅವರು ವಾಸವಿದ್ದ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯನ್ನು ಕಳೆದ ಹಲವು ದಿನಗಳಿಂದ ಶ್ರಮದಾನ ಮಾಡುವ ಮೂಲಕ ವಿದ್ಯಾರ್ಥಿಗಳು ಶಾಲೆಗೆ ಹೊಸ ಕಳೆ ತಂದಿದ್ದಾರೆ. ತರಗತಿ ಕೋಣೆ ಹಾಗೂ ಗೋಡೆಗಳಿಗೆ ಬಣ್ಣ ಬಣ್ಣದ ಚಿತ್ತಾರಗಳನ್ನು ಬಿಡಿಸುವ ಮೂಲಕ ಆಕರ್ಷಿಕವಾಗಿಸಿದ್ದಾರೆ. ತರಗತಿ ಕೊಠಡಿಗಳಿಗೆ ವಿವಿಧ ಚಿತ್ರಗಳನ್ನು ಬಿಡಿಸಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕ ವಾತಾವರಣ ಮೂಡಿಸಲಾಗಿದೆ ಎಂದರು.

ಗ್ರಂಥಾಲಯಗಳಿಗೆ ಪುಸ್ತಕ ಹಾಗೂ ವಿಜ್ಞಾನ ಪ್ರಯೋಗಗಳಿಗೆ ಅಗತ್ಯವಿರುವ ವೈಜ್ಞಾನಿಕ ಪ್ರಯೋಗ ಸಾಧನ ಸಲಕರಣೆ, ಶುದ್ಧ ಕುಡಿಯುವ ನೀರು, ಶೌಚಾಲಯಗಳ ಸ್ವತ್ಛತೆ, ಶಾಲಾ ಆವರಣದಲ್ಲಿ ಸ್ವತ್ಛತೆ ಸೇರಿದಂತೆ ಮೂಲ ಸೌಕರ್ಯ ಅಭಿವೃದ್ಧಿ ಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಅಭಿಷೇಕ ಶಾಲೆಯ ಮುಖ್ಯಗುರುಗಳು ಹಾಗೂ ಶಿಕ್ಷಕರು ಸಾಥ್‌ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next