Advertisement

ಸುತ್ತೂರು ಜಾತ್ರಾ ಮಹೋತ್ಸವಕ್ಕೆ ವರ್ಣರಂಜಿತ ಚಾಲನೆ

12:15 PM Jan 14, 2018 | |

ಮೈಸೂರು: ಸುತ್ತೂರು ಶ್ರೀಕ್ಷೇತ್ರದಲ್ಲಿ ಆರು ದಿನಗಳ ಕಾಲ ನಡೆಯುವ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ತಾರಾ ಮೆರಗಿನೊಂದಿಗೆ ಶನಿವಾರ ವರ್ಣರಂಜಿತ ಚಾಲನೆ ದೊರೆಯಿತು.

Advertisement

ಶಿವಮೊಗ್ಗದ ಶ್ರೀ ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮಿಗಳು, ಸುಕ್ಷೇತ್ರ ಕಂಬದಹಳ್ಳಿ ಜೈನಮಠದ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳ ಸಮ್ಮುಖದಲ್ಲಿ ನಟ ಡಾ.ಶಿವರಾಜ್‌ ಕುಮಾರ್‌ ಅವರು ಸಂವಾದ ವಾದನವನ್ನು ನುಡಿಸುವ ಮೂಲಕ ಸಾಂಸ್ಕೃತಿಕ ಮೇಳಕ್ಕೆ ಚಾಲನೆ ನೀಡಿದರೆ, ಮಾಜಿ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಸೋಬಾನೆ ಪದ ಸ್ಪರ್ಧೆಗೆ ಚಾಲನೆ ನೀಡಿದರು. ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್‌ ರಂಗೋಲಿ ಬಿಡಿಸುವ ಮೂಲಕ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿದರು.

ಸುತ್ತೂರು ಮಹಾ ಸಂಸ್ಥಾನ ಮಠದ ಕಿರಿಯ ಸ್ವಾಮೀಜಿಗಳಾದ ಜಯರಾಜೇಂದ್ರ ಸ್ವಾಮೀಜಿ, ಶಾಸಕರಾದ ಎಚ್‌.ಪಿ.ಮಂಜುನಾಥ್‌,ಎಂ.ಪಿ.ರವೀಂದ್ರ, ನಿವೃತ್ತ ಮುಖ್ಯಕಾರ್ಯದರ್ಶಿ ಬಿ.ಎಸ್‌.ಪಾಟೀಲ್‌, ಚಿತ್ರ ನಿರ್ಮಾಪಕ ಎಸ್‌.ಎ.ಚಿನ್ನೇಗೌಡ, ನಿವೃತ್ತ ಐಎಎಸ್‌ ಅಧಿಕಾರಿ ಡಾ.ಸಿ.ಸೋಮಶೇಖರ್‌, ಜೆಎಸ್‌ಎಸ್‌ ಮಹಾ ವಿದ್ಯಾಪೀಠದ ಕಾರ್ಯದರ್ಶಿ ಎಸ್‌.ಪಿ.ಮಂಜುನಾಥ್‌ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next