Advertisement

ಹೋರಾಟಗಾರರ ಆದರ್ಶವನ್ನು ಮೈಗೂಡಿಸಿ: ಸುನಿಲ್‌

07:15 AM Aug 16, 2017 | |

ಕಾರ್ಕಳ: ಕ್ವಿಟ್‌ ಇಂಡಿಯಾ ಚಳುವಳಿಗೆ 75 ವರ್ಷ ತುಂಬುತ್ತಿದ್ದು ,ಇದೀಗ 71 ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತೆ ಮತ್ತೆ ನೆನೆದುಕೊಂಡು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸುವ ಕೆಲಸವಾಗಲಿ ಎಂದು ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.

Advertisement

ಅವರು ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಂಗಳವಾರ ಸ್ಥಳೀಯ ಶ್ರೀ ಮಂಜುನಾಥ ಪೈ ಸಭಾಭವನದಲ್ಲಿ ಜರಗಿದ ಸಾಂಸ್ಕೃತಿಕ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾ.ಪಂ. ಅಧ್ಯಕ್ಷೆ ಮಾಲಿನಿ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಾರ್ಕಳ ಪುರಸಭಾ ಅಧ್ಯಕ್ಷೆ ಅನಿತಾ ಆರ್‌ ಅಂಚನ್‌, ಜಿ.ಪಂ ಸದಸ್ಯ ಉದಯ ಎಸ್‌.ಕೋಟ್ಯಾನ್‌,ಪುರಸಭಾ ಉಪಾಧ್ಯಕ್ಷ ಗಿರಿಧರ್‌ ನಾಯಕ್‌ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ತಾ.ಪಂ. ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಕೇಶವ್‌ ಶೆಟ್ಟಿಗಾರ್‌,ಪುರಸಭಾ ಮುಖ್ಯಾಧಿಕಾರಿ ಮೇಬಲ್‌ ಡಿಸೋಜಾ,ಜಿ.ಪಂ ಸದಸ್ಯೆ ದಿವ್ಯಾ ಅಮೀನ್‌,ಜ್ಯೋತಿ ಹರೀಶ್‌, ರೇಶ್ಮಾ ಉದಯ್‌,ತಾ.ಪಂ.ಉಪಾಧ್ಯಕ್ಷ ಗೋಪಾಲ ಮೂಲ್ಯ, ಮೊದಲಾದವರು ಉಪಸ್ಥಿತರಿದ್ದರು. ತಹಶೀಲ್ದಾರ್‌ ಟಿ.ಜಿ.ಗುರುಪ್ರಸಾದ್‌ ಸ್ವಾಗತಿಸಿದರು.

ಶಿಕ್ಷಕ ಎ.ಕೆ ಗಣಪಯ್ಯ ಕಾರ್ಯಕ್ರಮ ನಿರೂಪಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌ ಕೆ ಮನಮೋಹನ್‌ ವಂದಿಸಿದರು.ಸಾಂಸ್ಕೃತಿಕ ಕಾರ್ಯಕ್ರಮ ಇದೇ ಸಂದರ್ಭದಲ್ಲಿ ಎಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.ಸರಕಾರದಿಂದ ನೀಡಲಾದ ಲ್ಯಾಪ್‌ಟಾಪ್‌ ವಿತರಿಸಲಾಯಿತು.ಬಳಿಕ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.

Advertisement

ಪಥ ಸಂಚಲನೆ: ವಿಜೇತ ತಂಡಗಳು
ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಪಥ ಸಂಚಲನದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ವಿಜೇತ ತಂಡಗಳಾಗಿ ಸ.ಮಾ.ಹಿ.ಪ್ರಾ.ಶಾಲೆ ಪೆರ್ವಾಜೆ, ಸುಂದರ ಪುರಾಣಿಕ ಪ್ರೌಢಶಾಲೆ ಪೆರ್ವಾಜೆ, ಕಾಲೇಜು ವಿಭಾಗದಲ್ಲಿ ಭುವನೇಂದ್ರ ಕಾಲೇಜು ನೇವಿ ತಂಡ ಕಾರ್ಕಳ ಹೊರಹೊಮ್ಮಿತು.

Advertisement

Udayavani is now on Telegram. Click here to join our channel and stay updated with the latest news.

Next