Advertisement
ದೇಶದ ಒಟ್ಟು 180 ನಗರಗಳಲ್ಲಿ 264 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿಯ ಪರೀಕ್ಷೆಗೆ ಒಟ್ಟು 90,607 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಕಾಮೆಡ್‌ಕೆ ಯುಜಿಇಟಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿದ್ದು ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಹಂತದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 9ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಮೊದಲ ಹಂತದ ಪರೀಕ್ಷೆಗಳು, ಮಧ್ಯಾಹ್ನ 2ರಿಂದ 5 ಗಂಟೆವರೆಗೆ ಎರಡನೇ ಹಂತದ ಪರೀಕ್ಷೆಗಳು ನಡೆಯಲಿವೆ. ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗೆ ನಿಗದಿತ ಸಮಯಕ್ಕೆ ಮೊದಲೇ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರುವಂತೆ ಕಾಮೆಡ್‌ಕೆ ಅಧಿಕಾರಿಗಳು ತಿಳಿಸಿದ್ದಾರೆ.
Advertisement
ನಾಳೆ Comed K ಪರೀಕ್ಷೆ
09:46 PM May 26, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.