Advertisement

ದುಬೈನಿಂದ ಬಂದು ವಿಶ್ವನಾಥ್‌  ಜತೆ ಮಾತಾಡ್ತೀನಿ: ಸಿದ್ದರಾಮಯ್ಯ

10:24 AM Apr 28, 2017 | Team Udayavani |

ಮೈಸೂರು: ಪಕ್ಷದಲ್ಲಿ ತಮ್ಮನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಅಸಮಾಧಾನಗೊಂಡು ಕಾಂಗ್ರೆಸ್‌ ತೊರೆಯಲು ಮುಂದಾಗಿರುವ ಮಾಜಿ ಸಂಸದ ಎಚ್‌.ವಿಶ್ವನಾಥ್‌ ಮನವೊಲಿಕೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿದ್ದಾರೆ. 

Advertisement

ದುಬೈ ಪ್ರವಾಸದಿಂದ ವಾಪಸ್ಸಾದ ಬಳಿಕ ದೂರವಾಣಿಯಲ್ಲಿ ವಿಶ್ವನಾಥ್‌ ಜತೆಗೆ ಮಾತನಾಡುವುದಾಗಿ ಸಿದ್ದರಾಮಯ್ಯ ಗುರುವಾರ ಬೆಳಗ್ಗೆ ಗೃಹಕಚೇರಿ ಕಾವೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಪ್ರದೇಶ ಕುರುಬರ ಸಂಘದ ಮುಖಂಡರ ನಿಯೋಗಕ್ಕೆ ಭರವಸೆ ನೀಡಿದ್ದಾರೆ. 

ವಿಶ್ವನಾಥ್‌ ನನ್ನ ಬಗ್ಗೆ ಮಾಧ್ಯಮಗಳಿಗೆ ಸಲ್ಲದ ಹೇಳಿಕೆಗಳನ್ನು ಕೊಡುತ್ತಲೇ ಬಂದಿದ್ದಾರೆ. ನನ್ನ ವಿರುದ್ಧ ಇಷ್ಟೆಲ್ಲಾ ಮಾತನಾಡಿದರೂ ನಾನು ಯಾವತ್ತಾದರೂ ವಿಶ್ವನಾಥ್‌ ಬಗ್ಗೆ ಮಾತನಾಡಿದ್ದೇನಾ ಎಂದು ನಿಯೋಗದಲ್ಲಿದ್ದ ಮುಖಂಡರನ್ನು ಪ್ರಶ್ನಿಸಿದರು. ವಿಧಾನ ಪರಿಷತ್‌ ಸದಸ್ಯ ಎಚ್‌.ಎಂ.ರೇವಣ್ಣ ಹಾಗೂ ಶಾಸಕ ವರ್ತೂರ್‌ ಪ್ರಕಾಶ್‌ ಈಗಾಗಲೇ ಎಚ್‌.ವಿಶ್ವನಾಥ್‌ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಆಗ ಮೂರು ವರ್ಷಗಳಿಂದ ಪಕ್ಷದೊಳಗೆ ತಾವು ಅನುಭವಿಸುತ್ತಿರುವ ನೋವು, ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆ ವೇಳೆ ಪಕ್ಷ ತಮ್ಮನ್ನು ನಡೆಸಿಕೊಂಡ ರೀತಿ ಬಗ್ಗೆ ವಿಶ್ವನಾಥ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next