Advertisement

ಸರ್ಕಾರಿ ಶಾಲೆಗೆ ಹೋಗೋಣ ಬನ್ನಿ

05:27 PM Jun 29, 2021 | Team Udayavani |

ವರದಿ : ಬಸವರಾಜ ಹೂಗಾರ

Advertisement

ಹುಬ್ಬಳ್ಳಿ: ಕೋವಿಡ್‌ ಹಿನ್ನೆಲೆಯಲ್ಲಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಪಾಲಕರು ಒಲವು ತೋರುತ್ತಿದ್ದಾರೆ. ಇದಕ್ಕೆ ಪೂರಕ ಎನ್ನುವಂತೆ ಸರಕಾರಿ ಶಾಲೆ ವಿದ್ಯಾರ್ಥಿಗಳು ಶಾಲಾ ಪ್ರವೇಶಕ್ಕೆ ಆಹ್ವಾನ, ಶಾಲೆಯಲ್ಲಿನ ಸೌಲಭ್ಯಗಳ ಬಗೆಗಿನ ಹೇಳಿಕೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕನ್ನಡ, ಆಂಗ್ಲ ಹಾಗೂ ಹಿಂದಿ ಭಾಷೆಯಲ್ಲಿ ವಿಡಿಯೋ ಮಾಡಿ ಖಾಸಗಿ ಶಾಲೆಗಳ ಶುಲ್ಕ ಭರಣ ಮಾಡಲು ಸಾಧ್ಯವಾಗದೇ ಇರುವವರಿಗೆ ಪ್ರೋತ್ಸಾಹದಾಯಕ ಮಾತುಗಳನ್ನು ಹೇಳುವ ಮೂಲಕ ಸರಕಾರಿ ಶಾಲೆಗಳಿಗೆ ಬನ್ನಿ ಎಂದು ಆಹ್ವಾನ ನೀಡುತ್ತಿದ್ದಾರೆ.

ಇಲ್ಲಿನ ಪೆಂಡಾರಗಲ್ಲಿ ಸರಕಾರಿ ಮಾದರಿ ಕನ್ನಡ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ ನಂ.2ರ ವಿದ್ಯಾರ್ಥಿಗಳು ಸುಮಾರು 30 ರಿಂದ 50 ಸೆಕೆಂಡ್‌ಗಳ ವಿಡಿಯೋ ಮಾಡಿ ತಮ್ಮ ಶಾಲೆ, ಸರಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳು, ನುರಿತ ಶಿಕ್ಷಕರಿಂದ ದೊರೆಯುವ ಗುಣಮಟ್ಟದ ಶಿಕ್ಷಣ, ಮಧ್ಯಾಹ್ನದ ಬಿಸಿಯೂಟ ಹಾಗೂ ಆರೋಗ್ಯ ಎಲ್ಲದಕ್ಕೂ ಸರಕಾರಿ ಶಾಲೆಗಳು ಸೂಕ್ತ. ಆದ್ದರಿಂದ ಎಲ್ಲರೂ ಸರಕಾರಿ ಶಾಲೆಗಳಿಗೆ ಪ್ರವೇಶ ಪಡೆಯಿರಿ ಎಂದು ವಿಡಿಯೋ ಮೂಲಕ ಆಹ್ವಾನ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Advertisement

Udayavani is now on Telegram. Click here to join our channel and stay updated with the latest news.

Next