Advertisement
ಎಚ್.ಡಿ.ಕುಮಾರಸ್ವಾಮಿ ಸೋಮವಾರ ದೆಹಲಿಗೆ ಬರುತ್ತಿದ್ದು, ಅವರ ಜತೆ ಮಾತುಕತೆ ವೇಳೆ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹಾಗೂ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಇರಲಿದ್ದಾರೆ. ಹೀಗಾಗಿ, ರಾಜ್ಯ ನಾಯಕರು ಬರುವುದು ಬೇಡ ಎಂದು ಖುದ್ದು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ.
ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ರಾಜ್ಯದ ಕೆಲವು ನಾಯಕರು ಸೋಮವಾರ ದೆಹಲಿಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ, ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ದೆಹಲಿ ಭೇಟಿಯನ್ನು ರದ್ದುಪಡಿಸುವ
ಸಾಧ್ಯತೆಯಿದೆ. ಎಚ್.ಡಿ.ಕುಮಾರಸ್ವಾಮಿಯವರು ಮೈತ್ರಿಕೂಟ ಸರ್ಕಾರ ರಚನೆಗೆ ಬೆಂಬಲ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನ ನೀಡಲು ಬರುತ್ತಿದ್ದಾರೆ. ಹೀಗಾಗಿ, ಈ ಸಂದರ್ಭದಲ್ಲಿ ಎಲ್ಲಾ ನಾಯಕರು
ಬರುವುದು ಬೇಡ. ರಾಜ್ಯ ನಾಯಕರು ಬಂದರೆ, ಪ್ರಮಾಣ ವಚನಕ್ಕೆ ಮುನ್ನವೇ ಸಂಪುಟ ವಿಸ್ತರಣೆ, ಉಪ ಮುಖ್ಯಮಂತ್ರಿ ಬೇಡಿಕೆ ಗೊಂದಲ ಸೃಷ್ಟಿಯಾದರೆ ಬಿಜೆಪಿಗೆ ಆಹಾರ ಒದಗಿಸಿದಂತಾಗುತ್ತದೆ ಎಂಬ ಕಾರಣಕ್ಕೆ ಹೈಕಮಾಂಡ್ ಈ ತೀರ್ಮಾನಕ್ಕೆ ಬಂದಿದೆ ಎಂದು ಹೇಳಲಾಗಿದೆ.