Advertisement
ಸಾರಿಗೆ ಅಧಿಕಾರಿಗೆ ನೋಟಿಸ್: ಸೂಚನೆಬಸ್ಗಳಲ್ಲಿ ಸಾಮಾಜಿಕ ಅಂತರ ಪಾಲನೆಯಾಗದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಬಸ್‌ಗಳ ವಿರುದ್ಧ ಪ್ರಕರಣ ದಾಖಲಿಸದ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ನೋಟಿಸ್ ನೀಡುವಂತೆ ಸೂಚಿಸಿದರು. ಬಸ್‌ಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಪ್ರಯಾಣಿಕರಿದ್ದಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ಕೆಳಗಿಳಿಸಿ ಚಾಲಕ ಮತ್ತು ಕಂಡಕ್ಟರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಹಾಗೂ ಹೆಚ್ಚುವರಿ ಪ್ರಯಾಣಿಕರಿಗೆ ಆರ್‌ಟಿಒ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಲ್ಲ ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.