Advertisement

BJP-PDP ಮೈತ್ರಿ ಸೂತ್ರಧಾರ ರಾಮ್‌ಮಾಧವ್‌ಗೆ ಕಾಶ್ಮೀರ ಚುನಾವಣಾ ಉಸ್ತುವಾರಿ

10:23 PM Aug 21, 2024 | Team Udayavani |

ನವದೆಹಲಿ: ಬಿಜೆಪಿ ಹಿರಿಯ ನಾಯಕ ರಾಮ್‌ ಮಾಧವ್‌ರನ್ನು ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

Advertisement

2015ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ ಜತೆ ಮೈತ್ರಿ ಮಾಡಿಕೊಂಡು ಕಾಶ್ಮೀರದಲ್ಲಿ ಸರ್ಕಾರ ರಚಿಸಿದ ಹೆಗ್ಗಳಿಕೆ ರಾಮ್‌ ಮಾಧವ್‌ ಅವರಿಗೆ ಇದೆ.

ಅವರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸಚಿವ ಜಿ.ಕಿಶನ್‌ ರೆಡ್ಡಿ ಅವರನ್ನೂ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಮಾಧವ್‌ ನೇಮಕ ಬಗ್ಗೆ ನವದೆಹಲಿಯಲ್ಲಿ ಬಿಜೆಪಿ ವರಿಷ್ಠರು ಬಿರುಸಿನ ಸಮಾಲೋಚನೆ ನಡೆಸಲಾಗಿತ್ತು ಎಂಬ ಅಂಶವೂ ಬೆಳಕಿಗೆ ಬಂದಿದೆ. ಬಿಜೆಪಿ ಸಂಘಟನೆ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರನ್ನು 2020ರಲ್ಲಿ ಕೈ ಬಿಡಲಾಗಿತ್ತು. 2021ರಲ್ಲಿ ಆರ್‌ಎಸ್‌ಎಸ್‌ ಕೇಂದ್ರ ಸಮಿತಿಗೆ ಪುನರ್‌ನೆàಮಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next