Advertisement
ಕರ್ನಾಟಕದ ವಿದ್ಯಾರ್ಥಿಗಳು ಇತರ ರಾಜ್ಯಗಳಲ್ಲಿ ಸೀಟು ಪಡೆಯುವುದನ್ನು ತಪ್ಪಿಸುವುದು ಹಾಗೂ ನಮ್ಮ ವಿದ್ಯಾರ್ಥಿಗಳು ರಾಜ್ಯದಲ್ಲಿಯೇ ಸರಕಾರಿ ಕೋಟ ಸೀಟುಗಳನ್ನು ಪಡೆಯುವ ಅವಕಾಶಕ್ಕೆ ಆದ್ಯತೆ ನೀಡುವ ದೃಷ್ಟಿಯಿಂದ ವಿದ್ಯಾರ್ಥಿಗಳು ಪಾವತಿಸಿರುವ ಶುಲ್ಕವನ್ನು ಮರುಪಾವತಿ ಮಾಡಲು ನಿರ್ಧರಿಸಲಾಗಿದೆ ಎಂದು ಕಾಮೆಡ್-ಕೆ ತಿಳಿಸಿದೆ.
ಗಳೊಂದಿಗೆ ಸಭೆ ನಡೆಸಿ ತೀರ್ಮಾನಿಸಿದೆ. ವಿದ್ಯಾರ್ಥಿಗಳಿಗೆ ಅನನುಕೂಲತೆ ಮತ್ತು ಆರ್ಥಿಕ ಹೊಡೆತ ತಪ್ಪಿಸುವುದಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೆ-ಸಿಇಟಿ ನಲ್ಲಿ ಸೀಟು ಪಡೆದುಕೊಂಡಿದ್ದರೆ, ಶೇ. 100 ಶುಲ್ಕವನ್ನು ಮರುಪಾವತಿ ಮಾಡಲಾಗುತ್ತದೆ ಎಂದು ಕಾಮೆಡ್-ಕೆ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ| ಎಸ್. ಕುಮಾರ್ ತಿಳಿಸಿದ್ದಾರೆ. ಎಂಜಿನಿಯರಿಂಗ್ ಪ್ರವೇಶ ಪ್ರಕ್ರಿಯೆಯನ್ನು ನ. 30ರ ವರೆಗೆ ನಡೆಸಲು ಸುಪ್ರೀಂ ಕೋರ್ಟ್ ಸಮಯ ವಿಸ್ತರಿಸಿದೆ. ಆದ್ದರಿಂದ ಕೆಇಎ ಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಕಾಮೆಡ್-ಕೆ ಕೌನ್ಸೆಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಕನಿಷ್ಠ 15 ದಿನಗಳ ಕಾಲ ಮುಂದೂಡುವಂತೆ ಮನವಿ ಮುಂದೂಡುವಂತೆ ಸಭೆಯಲ್ಲಿ ಸರಕಾರ ಮಾಡಿರುವ ಮನವಿಯನ್ನು ಕಾಮೆಡ್-ಕೆ ತಿರಸ್ಕರಿಸಿದೆ ಎಂದು ತಿಳಿದು ಬಂದಿದೆ.
Related Articles
Advertisement