ಬೆಂಗಳೂರು: ಮುಂದಿನ ವರ್ಷದಿಂದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸುವ ಕಾಮೆಡ್ ಕೆ ಪರೀಕ್ಷೆ ರದ್ದು ಮಾಡಲು ಸರಕಾರ ನಿರ್ಧರಿಸಿದೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಅವರು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳೊಂದಿಗೆ ಬುಧವಾರ ನಡೆಸಿದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಖಾಸಗಿ ಕಾಲೇಜುಗಳಿಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಮೂಲಕವೇ ಪ್ರವೇಶ ಮಾಡಲು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ. ಈ ವರ್ಷ ಶೇ.10ರಷ್ಟು ಶುಲ್ಕ ಹೆಚ್ಚಳಕ್ಕೂ ಸರ್ಕಾರ ಒಪ್ಪಿಗೆ ನೀಡಿದೆ.
ಸದ್ಯ ವೃತ್ತಿಪರ ಶಿಕ್ಷಣ ಕೋರ್ಸ್ ಪ್ರವೇಶಕ್ಕೆ ರಾಜ್ಯ ಸರ್ಕಾರ ಮತ್ತು ಕಾಮೆಡ್-ಕೆ ಪ್ರತ್ಯೇಕ ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಸುತ್ತಿವೆ.ಮುಂದಿನ ವರ್ಷದಿಂದ ಒಂದೇ CET ನಡೆಸಲು ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಸಹಮತ ವ್ಯಕ್ತಪಡಿಸಿದೆ. ಈ ಕುರಿತು ಶೀಘ್ರದಲ್ಲಿ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಟ್ವೀಟ್ ಮಾಡಿದ್ದಾರೆ.
ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಒಕ್ಕೂಟದ ಜತೆ ನಡೆದ ಸಭೆಯಲ್ಲಿ ಎಂಜಿನಿಯರಿಂಗ್, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಶುಲ್ಕವನ್ನು ಪ್ರಸಕ್ತ ವರ್ಷ ಶೇ. 10ರಷ್ಟು ಹೆಚ್ಚಿಸಲು ಒಪ್ಪಿಗೆ ನೀಡಲಾಯಿತು.ಶೇ. 25ರಷ್ಟು ಶುಲ್ಕ ಹೆಚ್ಚಿಸಲು ಬೇಡಿಕೆಯಿದ್ದರೂ ಶುಲ್ಕ ನಿಗದಿ ಸಮಿತಿಯ ವರದಿಯನ್ವಯ ಈ ತೀರ್ಮಾನ ಕೈಗೊಳ್ಳಲಾಗಿದೆ.