Advertisement

ಕನ್ನಡ ಚಿತ್ರರಂಗದ ಹಾಸ್ಯನಟ ಮೈಕಲ್‌ ಮಧು ನಿಧನ

08:30 AM May 14, 2020 | Sriram |

ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯನಟ ಮೈಕಲ್‌ ಮಧು ಬುಧವಾರ ಬೆಂಗಳೂರಿನ ಕೆ.ಆರ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Advertisement

ಕಳೆದ ಎರಡೂವರೆ ದಶಕಗಳಿಂದ ಕನ್ನಡದ ಸುಮಾರು 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಮೈಕಲ್‌ ಮಧು ವಿವಿಧ ಹಾಸ್ಯ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು.

ಕಳೆದ ಕೆಲ ಸಮಯದಿಂದ ಮಧುಮೇಹ ಮತ್ತಿತರ ಆರೋಗ್ಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಮಧು ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಧು ಮೃತರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಮೈಕಲ್ ಮಧು ಅವರು ಓಂ, ಲವ್ ಟ್ರೇನಿಂಗ್ ಸ್ಕೂಲ್, ಮೀಸೆ ಹೊತ್ತ ಗಂಡಸಿಗೆ ಡಿಮ್ಯಾಂಡಪ್ಪೊ ಡಿಮ್ಯಾಂಡು, ಪಾಪಿಗಳ ಲೋಕದಲ್ಲಿ, ಎಕೆ 47, ಎ, ಮಿನುಗು ತಾರೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಕಾಶಿನಾಥ್ ಅವರ ನಿರ್ದೇಶನದ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಮೈಕಲ್ ಮಧು. 85 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next