Advertisement

ಮೇ 28 ರಂದು ಕಾಮೆಡ್‌-ಕೆ ಪರೀಕ್ಷೆ

01:22 AM Mar 06, 2023 | Team Udayavani |

ಮಂಗಳೂರು: ರಾಜ್ಯದ 150 ಎಂಜಿನಿಯರಿಂಗ್‌ ಕಾಲೇಜು ಮತ್ತು 50ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶಕ್ಕಾಗಿ ಸಂಯೋಜಿತ ಪರೀಕ್ಷೆಯಾಗಿ ಮೇ 28ರಂದು ಕಾಮೆಡ್‌-ಕೆ ಯುಗೇಟ್‌ ಮತ್ತು ಯುನಿ ಗೇಜ್‌ ಪ್ರವೇಶ ಪರೀಕ್ಷೆಗಳು ನಡೆಯಲಿವೆ.

Advertisement

ಪ್ರವೇಶ ಪರೀಕ್ಷೆಯನ್ನು ಕರ್ನಾ ಟಕ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಸಂಘದೊಂದಿಗೆ ಸಂಯೋಜಿತವಾ ಗಿರುವ ಕಾಲೇಜುಗಳು ಮತ್ತು ಬಿಇ/ ಬಿಟೆಕ್‌ ತರಗತಿ ಒದಗಿಸುವ ಯುನಿ-ಗೇಜ್‌ ಸದಸ್ಯ ವಿ.ವಿ.ಗಳಿಗೆ ನಡೆಸಲಾಗುತ್ತದೆ. ದೇಶಾದ್ಯಂತ 150ಕ್ಕೂ ಹೆಚ್ಚು ನಗರಗಳಲ್ಲಿ 400 ಪರೀಕ್ಷಾ ಕೇಂದ್ರಗಳೊಂದಿಗೆ ಪರೀಕ್ಷೆಯನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತದೆ ಎಂದು ಕಾಮೆಡ್‌-ಕೆಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ| ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ. ಆಸಕ್ತ ಅರ್ಜಿದಾರರು ಜಠಿಠಿಟs://ಡಿಡಿಡಿ.cಟಞಛಿಛk.ಟ್ಟಜ ಯಲ್ಲಿ ನೋಂದಾಯಿಸಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆಯು ಎ. 24ರ ವರೆಗೆ ಆನ್‌ಲೈನ್‌ನಲ್ಲಿ ಲಭ್ಯವಿರಲಿದೆ.

ಕಾಮೆಡ್‌-ಕೆ ಈ ವರ್ಷ ಕಾಮೆಡ್‌ ಕರೇಸ್‌ ಪ್ರಾರಂಭಿಸಿದೆ, ಇದರಲ್ಲಿ ಭಾಗವಹಿಸುವ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಕೌಶಲವರ್ಧಕ ಕೋರ್ಸ್‌ಗಳ ಮೂಲಕ ಉದ್ಯೋಗಕ್ಕೆ ಸಜ್ಜುಗೊಳಿಸುತ್ತದೆ. ರಾಜ್ಯದಲ್ಲಿ ಎಂಟು ಇನ್ನೋವೇಶನ್‌ ಹಬ್‌ಗಳನ್ನು ಸ್ಥಾಪಿಸಿದೆ. ಅವುಗಳಲ್ಲಿ 4 ಬೆಂಗಳೂರಿನಲ್ಲಿದ್ದರೆ, ಉಳಿದವು ಮೈಸೂರು, ಕಲಬುರಗಿ, ಮಂಗಳೂರು, ಬೆಳಗಾವಿಯಲ್ಲಿವೆ ಎಂದರು.

ಈ ಬಾರಿ 22 ಸಾವಿರ ಸೀಟುಗಳಿದ್ದು, 10 ಸಾವಿರ ಭರ್ತಿಯಾಗುವ ನಿರೀಕ್ಷೆ ಇದೆ ಎಂದು ಎರಾ ಫೌಂಡೇಶನ್‌ ಸಿಇಒ ಪಿ. ಮುರಳಿಧರ್‌ ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next