Advertisement
ಕರ್ನಾಟಕದ 150 ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಸೇರಿದಂತೆ ದೇಶದೆಲ್ಲೆಡೆ ಇರುವ ಒಟ್ಟು 190 ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಸುಮಾರು 22 ಸಾವಿರ ಎಂಜಿನಿಯರಿಂಗ್ ಸೀಟುಗಳ ಪ್ರವೇಶಾತಿಗಾಗಿ ಈ ಪರೀಕ್ಷೆಯನ್ನು ಮೇ 12 ರಂದು ದೇಶಾದ್ಯಂತ ನಡೆಸಲಾಗಿತ್ತು. ಒಟ್ಟು 1,03,799 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
Related Articles
Advertisement
ಮೇ 12ರಂದು 191 ನಗರಗಳಲ್ಲಿರುವ 264 ಪರೀಕ್ಷಾ ಕೇಂದ್ರಗಳಲ್ಲಿ ಮೂರು ಸೆಷನ್‌ಗಳಲ್ಲಿ ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 1.18 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು ಈ ಪೈಕಿ 1.03 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆ ಬರೆದವರಲ್ಲಿ 35,124 ಮಂದಿ ಕರ್ನಾಟಕದವರು ಮತ್ತು 68,675 ಕರ್ನಾಟಕೇತರ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು.
ಕೌನ್ಸೆಲಿಂಗ್ ನೋಂದಣಿ ಆರಂಭ: ಕೌನ್ಸೆಲಿಂಗ್ ನೋಂದಣಿ ಮತ್ತು ಡಾಕ್ಯುಮೆಂಟ್ ಅಪ್‌ಲೋಡ್ ಪ್ರಕ್ರಿಯೆ ಮೇ 24 ರ ಸಂಜೆ 4 ರಿಂದ ಪ್ರಾರಂಭವಾಗಿದೆ. ಅಭ್ಯರ್ಥಿಗಳ ಶೇಕಡವಾರು ಅಂಕ ಹಾಗೂ ರ್‍ಯಾಂಕ್ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಕೌನ್ಸಿಲಿಂಗ್ ನಡೆಸುವುದಾಗಿ ಕಾಮೆಡ್-ಕೆಯ ಕಾರ್ಯಕಾರಿ ನಿರ್ದೇಶಕ ಡಾ. ಎಸ್. ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.