Advertisement

ಚೀನಾದಿಂದ ಹೊರಗೆ ಬರುವ ಉದ್ದಿಮೆ ಸೆಳೆಯಲು ಕಾರ್ಯಪಡೆ

12:59 PM May 18, 2020 | Suhan S |

ಹುಬ್ಬಳ್ಳಿ: ಚೀನಾದಿಂದ ಹೊರಬರುವ ಉದ್ದಿಮೆಗಳು ಹಾಗೂ ಬಂಡವಾಳವನ್ನು ಕರ್ನಾಟಕ ರಾಜ್ಯದ ಕಡೆಗೆ ತರಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಟಾಸ್ಕ್ಪೋರ್ಸ್‌ ಕಮಿಟಿ ರಚಿಸಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಹೇಳಿದ್ದಾರೆ.

Advertisement

ಬೇರೆ ರಾಜ್ಯಗಳಿಗಿಂತ ಮೊದಲೇ ಕರ್ನಾಟಕದಲ್ಲಿ ಕೈಗಾರಿಕೆಗಳ ಪುನರ್‌ ಆರಂಭಕ್ಕೆ ಅವಕಾಶ ನೀಡಲಾಯಿತು. ಸೀಲ್‌ಡೌನ್‌ ಹೊರತು ಪಡಿಸಿ ಇತರೆ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳು ಶುರುವಾಗಿವೆ. ಈಗಾಗಲೇ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಮುಖ್ಯಮಂತ್ರಿ ಹಾಗೂ ಕೈಗಾರಿಕಾ ಮಂತ್ರಿಗಳ ನೇತೃತ್ವದಲ್ಲಿನ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಕೈಗಾರಿಕಾ ಸ್ಥಾಪನೆಗೆ ಮುಂದೆ ಬರುವ ಉದ್ಯಮಿಗಳಿಗೆ ಯಾವುದೇ ಕಾನೂನಿನ ತೊಡಕು ಬರದ ಹಾಗೆ ಭೂಮಿ ಹಸ್ತಾಂತರ ಹಾಗೂ ವಿವಿಧ ಇಲಾಖೆಗಳ ಪರವಾನಗಿ ಪಡೆಯಲು ಏಕಗವಾಕ್ಷಿ ಯೋಜನೆ ವ್ಯವಸ್ಥೆ ರೂಪಿಸಲಾಗಿದೆ ಎಂದು ಹೇಳಿದರು.

ಕೋವಿಡ್ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಘೋಷಿಸಿರುವ 20 ಲಕ್ಷ ಕೋಟಿ ಪ್ಯಾಕೇಜ್‌ನಿಂದಾಗಿ ದೇಶದಲ್ಲಿ ಹೊಸ ಮನ್ವಂತರ ಪ್ರಾರಂಭವಾಗಲಿದೆ. ಹಂತ ಹಂತವಾಗಿ ಈ ಪ್ಯಾಕೇಜ್‌ ಜಾರಿ ನಂತರ ದೇಶದ ಆರ್ಥಿಕತೆಯಲ್ಲಿ ಬದಲಾವಣೆಯಾಗಲಿದೆ. ಸಣ್ಣ ಹಾಗೂ ಮಧ್ಯಮ ಕೈಗಾರಿಕೆ, ಶೇರು ವಹಿವಾಟಿನಲ್ಲಿ ಚೇತೋಹಾರಿ ಬೆಳವಣಿಗೆ ಕಂಡುಬರುತ್ತಿದೆ. ದೇಶದಲ್ಲಿ ಲಾಕ್‌ಡೌನ್‌ ಸಡಿಲಿಕೆ ಮಾಡಿ ಕೈಗಾರಿಕೆಗಳನ್ನು ಮರು ಚಾಲನೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next