Advertisement
ನಗರದಲ್ಲಿ ಹಮ್ಮಿಕೊಂಡ ಮೂರು ದಿನಗಳ ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಬುಧವಾರ ಭಾಗವಹಿಸಿ ಮಾತನಾಡಿದ ಅವರು, “ಶಾಲಾ-ಕಾಲೇಜು, ವಿಶ್ವವಿದ್ಯಾಲಯಗಳು, ಖಾಸಗಿ ಕಂಪನಿಗಳಲ್ಲಿ ಗ್ಯಾರೇಜ್ ಕೇಂದ್ರಿತ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ನೂತನ ನೀತಿಯು ಈ ಎಲ್ಲ ಅಂಶಗಳನ್ನೂ ಒಳಗೊಂಡಿರಲಿದೆ ಎಂದು ಹೇಳಿದರು.
Related Articles
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕನ್ನಡವನ್ನು ಉನ್ನತ ಶಿಕ್ಷಣದಲ್ಲಿ ಅಳವಡಿಸುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಬಹಳ ವರ್ಷಗಳಿಂದ ಇರುವ ಪ್ರಶ್ನೆ. ಕಾನೂನಿನ ಪರಿಶೀಲನೆಗೆ ಸರ್ಕಾರ ಅಗತ್ಯ ಕ್ರಮ ವಹಿಸಿದೆ ಎಂದಷ್ಟೇ ಹೇಳಿದರು.
Advertisement
ಬೆಂಗಳೂರು ಟೆಕ್ ಸಮಿಟ್ ಬಹಳ ದೊಡ್ಡ ಸಮಾವೇಶ. ವಿಶ್ವದಾದ್ಯಂತ ಏಳು ಸಾವಿರಕ್ಕೂ ಹೆಚ್ಚು ಗಣ್ಯರು ವರ್ಚುಯಲ್ ಆಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಹಲವಾರು ಕಂಪನಿಗಳು ಆರೋಗ್ಯ ಕ್ಷೇತ್ರ, ಕೃತಕ ಬುದ್ಧಿಮತ್ತೆ, ನವೀಕರಿಸಬಹುದಾದ ಇಂಧನ, ಏರೋಸ್ಪೇಸ್ ಸೇರಿದಂತೆ ಹೈಟೆಕ್ ತಂತ್ರಜ್ಞಾನದ ಕ್ಷೇತ್ರದಲ್ಲಿ ಆಸಕ್ತಿ ವಹಿಸಿವೆ ಎಂದು ಮಾಹಿತಿ ನೀಡಿದರು.