Advertisement
ಬುಧವಾರ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ನಡೆದ ಬೃಹತ್ ಜಾಥಾ ಮತ್ತು ಧರಣಿ ಸಭೆಯಲ್ಲಿ ಅವರು ಮಾತನಾಡಿದರು.
ಸಿಐಟಿಯು ಜಿಲ್ಲಾಧ್ಯಕ್ಷ ಕೆ. ಶಂಕರ್ ಮಾತನಾಡಿ, ಡಿ. 10ರಂದು ತುಮಕೂರಿನಲ್ಲಿ 30 ಸಾವಿರ ಮಂದಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸೇರಲಿದ್ದಾರೆ. ಅನಂತರ ಬೆಂಗಳೂರಿಗೆ ಪಾದಯಾತ್ರೆ ನಡೆಯಲಿದೆ. ರಾಜ್ಯ ಮತ್ತು ಕೇಂದ್ರ ಸರಕಾರ ನಮ್ಮ ಬೇಡಿಕೆಗಳನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ ಮಾತನಾಡಿ, ಅಂಗನವಾಡಿಗಳನ್ನು ಖಾಸಗೀಕರಣ ಮಾಡಬಾರದು. ಅಂಗನವಾಡಿ ವ್ಯವಸ್ಥೆ ಬದಲಾಯಿಸುವ ಕೆಲಸಕ್ಕೆ ಸರಕಾರ ಕೈ ಹಾಕಬಾರದು ಎಂದು ಆಗ್ರಹಿಸಿದರು. ಸಿಐಟಿಯು ಕಾರ್ಯದರ್ಶಿ ಕವಿರಾಜ್, ಪ್ರಮುಖರಾದ ಸುಶೀಲಾ, ಪ್ರೇಮಾ, ವಾಣಿ, ಅಂಬಿಕಾ, ಪುಷ್ಪಾ, ಪ್ರಮೀಳಾ, ಜಯಲಕ್ಷ್ಮೀ, ಸರೋಜಾ, ಸರೋಜಿನಿ, ಆಶಾಲತಾ, ಶಾಂತಾ, ಭಾಗ್ಯ, ಜಯಲಕ್ಷ್ಮೀ, ವಿದ್ಯಾರಾಜ್ ಮತ್ತಿತರರು ಉಪಸ್ಥಿತರಿದ್ದರು.
Related Articles
ಉದಾರೀಕರಣ ನೀತಿಯಿಂದ ಅಂಗವಾಡಿಗಳನ್ನು ಖಾಸಗಿಗೆ ವಹಿಸಲು ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ. ಆಹಾರ, ಆರೋಗ್ಯ, ಶಿಕ್ಷಣವನ್ನು ನೀಡುತ್ತಿರುವ ಅಂಗನವಾಡಿ ನೌಕರರಿಗೆ ಕನಿಷ್ಠ 21 ಸಾವಿರ ರೂ. ವೇತನ ಜಾರಿ ಮಾಡಬೇಕು. ಮಾತೃಪೂರ್ಣ ಯೋಜನೆ ಸಹಾಯಕಿಯರ ಕೆಲಸಕ್ಕಾಗಿ ನೀಡುವ ಗೌರವ ಧನ ಹೆಚ್ಚಿಸಬೇಕು. ನಿವೃತ್ತರಾದವರಿಗೆ ಕನಿಷ್ಠ 6 ಸಾವಿರ ರೂ. ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು. ಅಂಗನವಾಡಿ ನೌಕರರು ಗೌರವ ಧನದ ಹೆಸರಿನಲ್ಲಿ ಗೌರವ ಕಳೆದು ಕೊಳ್ಳುತ್ತಿದ್ದಾರೆ. ಈ ಕಾರಣಕ್ಕಾಗಿ ದೇಶದಲ್ಲಿರುವ ಅಂಗನವಾಡಿ ನೌಕರರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಆರೋಪಿಸಿದರು.
Advertisement