Advertisement

500 ಬೆಡ್‌ ಕೋವಿಡ್‌ ಕೇರ್‌ ಸೆಂಟರ್‌ ಆರಂಭ

06:58 PM May 22, 2021 | Team Udayavani |

ಕಲಬುರಗಿ: ಸೌಮ್ಯ ಸ್ವಭಾವ ಮತ್ತು ತೀವ್ರತರವಲ್ಲದ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಗರದ ಸೇಡಂ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ 500 ಹಾಸಿಗೆ ಸಾಮರ್ಥ್ಯದ ವಸತಿ ನಿಲಯವನ್ನು ಜಿಮ್ಸ್‌ ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತಿಸಲಾಗಿದ್ದು, ಶುಕ್ರವಾರದಿಂದಲೇ ಕಾರ್ಯಾರಂಭ ಮಾಡಿದೆ.

Advertisement

500 ಹಾಸಿಗೆ ಸಾಮರ್ಥ್ಯದ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸದ್ಯ 50 ಬೆಡ್‌ಗಳು ಲಭ್ಯವಿವೆ. ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಲ್ಲಿ ಅದಕ್ಕನುಗುಣವಾಗಿ ಹಾಸಿಗೆಯನ್ನು ಹೆಚ್ಚಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶರಣಬಸಪ್ಪ ಗಣಜಲಖೇಡ್‌ ತಿಳಿಸಿದ್ದಾರೆ.

ಈ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ 36 ಆಕ್ಸಿಜನ್‌ ಕಾನ್ಸ್‌ಂಟ್ರೇಟರ್‌ ಗಳಿದ್ದು, ಉಸಿರಾಟ ಸಮಸ್ಯೆ ಇರುವ ರೋಗಿಗಳಿಗೆ ನೆರವಾಗಲಿದೆ. ಓರ್ವ ಫಾರ್ಮಾಸಿಸ್ಟ್‌ನ್ನು ನಿಯೋಜಿಸಲಾಗಿದೆ. ಅಗತ್ಯ ಔಷಧಿಗಳು ಸ್ಥಳದಲ್ಲಿಯೇ ಲಭ್ಯವಿರಲಿವೆ ಎಂದರು.

ಕೋವಿಡ್‌ ಸೋಂಕಿತರಿಗೆ ದಿನದ 24 ಗಂಟೆ ಚಿಕಿತ್ಸೆ ನೀಡಲು ಮೂರು ಪಾಳಿಯಲ್ಲಿ ಒಟ್ಟು ಮೂವರು ಎಂಬಿಬಿಎಸ್‌ ವೈದ್ಯರು, ಆರು ಜನ ಸ್ಟಾಫ್‌ ನರ್ಸ್‌ಗಳು, ಆರು ಗ್ರೂಪ್‌ ಡಿ ನೌಕರರನ್ನು ನಿಯೋಜಿಸಲಾಗಿದೆ. ಜಿಲ್ಲಾಡಳಿತದಿಂದಲೇ ರೋಗಿಗಳಿಗೆ ಊಟದ ವ್ಯವಸ್ಥೆ ಮಾಡಲಾಗುತ್ತದೆ. ತುರ್ತು ಸಂದರ್ಭದಲ್ಲಿ ಉಪಯೋಗಕ್ಕೆ ಆಂಬ್ಯುಲೆನ್ಸ್‌ ಸಹ ಲಭ್ಯವಿರಲಿದೆ ಎಂದು ಡಿಎಚ್‌ಒ ವಿವರಿಸಿದರು.

ಕೇರ್‌ ಸೆಂಟರ್‌ನಲ್ಲಿ ಇದೇ ವೇಳೆ ಆಕ್ಸಿಜನ್‌ ಕಾನ್ಸ್‌ಂಟ್ರೇಟರ್‌ ಗಳು ಯಾವ ರೀತಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದು ಡಿಹೆಚ್‌ಒ ಡಾ| ಶರಣಬಸಪ್ಪ ಗಣಜಲಖೇಡ್‌ ಪ್ರಾಯೋಗಿಕವಾಗಿ ತೋರಿಸಿ ಕೊಟ್ಟರು. ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿಗಳಾದ ಡಾ| ಶರಣ ಬಸಪ್ಪ ಕ್ಯಾತನಾಳ, ಡಾ| ಮಾರುತಿ ಕಾಂಬಳೆ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next