Advertisement
ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್‌ಕುಮಾರ್ ಹಾಗೂ ಪೌರಾಡಳಿತ ಸಚಿವ ಡಾ. ನಾರಾಯಣಗೌಡ ಈ ಎರಡು ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಜಿಲ್ಲಾಡಳಿತ, ನಗಾರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರಸಭೆ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್‌ಕುಮಾರ್, ಸಾರ್ವಜನಿಕರ ಅನುಕೂಲಕ್ಕಾಗಿ ನಗರಸಭೆ ವತಿಯಿಂದ ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಿಸಲಾಗಿದ್ದು ಕಟ್ಟಡದಲ್ಲಿ ವಾಹನ ನಿಲುಗಡೆ ಸ್ಥಳ, ಉಗ್ರಾಣ ಕೊಠಡಿ, ಶಾಪಿಂಗ್ ಮಳಿಗೆ ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಖಾಸಗಿ ಬಸ್ ನಿಲ್ದಾಣದಲ್ಲಿ ಏಕಕಾಲದಲ್ಲಿ 22 ಬಸ್ ಗಳು ನಿಲ್ಲುವ ವ್ಯವಸ್ಥೆ ಮಾಡಲಾಗಿದೆ. ನಾಗರಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
Related Articles
Advertisement
ಜಿಪಂ ಅಧ್ಯಕ್ಷೆ ಎಂ.ಅಶ್ವಿನಿ, ಶಾಸಕ ಸಿ.ಎಸ್. ನಿರಂಜನ್‌ಕುಮಾರ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಬಿ. ಶಾಂತಮೂರ್ತಿ, ಜಿ.ಪಂ. ಉಪಾಧ್ಯಕ್ಷೆ ಶಶಿಕಲಾ, ತಾ.ಪಂ. ಅಧ್ಯಕ್ಷೆ ಎಚ್.ಎಸ್. ಶೋಭಾ, ಉಪಾಧ್ಯಕ್ಷ ಕೆ. ರವೀಶ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಎಸ್ಪಿ ದಿವ್ಯಾ ಸಾರಾ ಥಾಮಸ್, ಜಿಪಂ ಸಿಇಒ ಭೋಯರ್ ಹರ್ಷಲ್ ರಾವ್ ಇತರರಿದ್ದರು.