ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯನ್ನು ಸೋಮವಾರದಿಂದ(ಆಗಸ್ಟ್ 01) ಅನ್ವಯವಾಗುವಂತೆ ಇನ್ನಷ್ಟು ಇಳಿಕೆ ಮಾಡಿರುವುದಾಗಿ ತೈಲ ಮಾರಾಟ ಕಂಪನಿಗಳು ತಿಳಿಸಿವೆ. ಇಂದಿನಿಂದ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 36.50 ರೂ. ಇಳಿಕೆಯಾಗಿದೆ.
ಇದನ್ನೂ ಓದಿ:ದಕ್ಷಿಣ ಕನ್ನಡ: ಹತ್ಯೆಗೀಡಾದ ಮೂವರು ಯುವಕರ ಮನೆಗಳಿಗೆ ಹೆಚ್ ಡಿಕೆ ಭೇಟಿ
ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ತಕ್ಷಣಕ್ಕೆ ಅನ್ವಯವಾಗುವಂತೆ ಇಳಿಕೆ ಮಾಡಲಾಗಿದೆ. ಮತ್ತೊಂದೆಡೆ ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ವರದಿ ವಿವರಿಸಿದೆ.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 2,012.50 ರೂಪಾಯಿಯಿಂದ 1,976 ರೂಪಾಯಿಗೆ ಇಳಿಕೆಯಾಗಿದೆ.
ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಎಲ್ ಪಿಜಿ ದರವನ್ನು ನಾಲ್ಕು ಬಾರಿ ಪರಿಷ್ಕರಿಸಲಾಗಿದ್ದು, ಜೂನ್ ತಿಂಗಳಲ್ಲಿ ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 135 ರೂಪಾಯಿ ಇಳಿಕೆ ಮಾಡಿತ್ತು.