ನವದೆಹಲಿ: 18ನೇ ಲೋಕಸಭಾ ಚುನಾವಣೆಯ ಭರಾಟೆಯ ಸಮಯದಲ್ಲೇ ಇಂಧನ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಮತ್ತೆ ಇಳಿಕೆ ಮಾಡಿದ್ದು, ಮೇ 1ರಿಂದಲೇ ಹೊಸ ದರ ಅನ್ವಯವಾಗಲಿದೆ ಎಂದು ತಿಳಿಸಿದೆ.
ಇದನ್ನೂ ಓದಿ:ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್‌ನ ಸತ್ಯಾಸತ್ಯತೆ ಏನು?
ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 19 ರೂಪಾಯಿ ಇಳಿಕೆ ಮಾಡಿರುವುದಾಗಿ ತಿಳಿಸಿದೆ. 19 ಕೆಜಿಯ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆ ಇದೀಗ ದೆಹಲಿಯಲ್ಲಿ 1745.50 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ತಿಂಗಳು 19ಕೆಜಿಯ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆ 30.50 ರೂಪಾಯಿ ಇಳಿಕೆಯಾಗಿತ್ತು. ಉದ್ಯಾನನಗರಿ ಬೆಂಗಳೂರಿನಲ್ಲಿ 19ಕೆಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆ 1,799 ರೂಪಾಯಿಯಾಗಿದೆ.
ಕೇಂದ್ರದ ಆಡಳಿತಾರೂಢ ಎನ್ ಡಿಎ ಸರ್ಕಾರ ಇಂಧನ ಬೆಲೆಯನ್ನು ಇಳಿಸಲು ವಿಫಲವಾಗಿದ್ದು, ಅದೇ ರೀತಿ ಅಗತ್ಯವಾದ ದಿನಬಳಕೆ ವಸ್ತುಗಳ ಬೆಲೆಯನ್ನು ಇಳಿಕೆ ಮಾಡಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ.