ಪ್ರಧಾನಿ ಕಚೇರಿಯಲ್ಲಿ ನಡೆದ ಉನ್ನತಾಧಿಕಾರ ಸಭೆಯಲ್ಲಿ ಹಳೇ ವಾಹನಗಳನ್ನು ಗುಜರಿಗೆ ಹಾಕುವ ತೀರ್ಮಾನಕ್ಕೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಹವಾಮಾನ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ 20 ವರ್ಷಕ್ಕಿಂತ ಹಳೆಯ ವಾಹನಗಳನ್ನು ಗುಜರಿಗೆ ಹಾಕಲಾಗುವುದು ಎಂಬ ಸಚಿವ ನಿತಿನ್ ಗಡ್ಕರಿ ಅವರ ಘೋಷಣೆ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ. ಈ ಮಧ್ಯೆ, ಹಳೇ ವಾಹನಗಳ ಬದಲಿಗೆ ಹೊಸ ವಾಹನ ಖರೀದಿಸುವವರಿಗೆ ಜಿಎಸ್‌ಟಿ ವಿನಾಯಿತಿ ಸಿಗುವ ಸಾಧ್ಯತೆ ಇದೆ. ಗುಜರಿ ವಾಹನಗಳ ಜಿಎಸ್‌ಟಿಯನ್ನು ಶೇ.28ರಿಂದ ಶೇ.18ಕ್ಕೆ ಇಳಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ.
Advertisement