Advertisement

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

03:29 AM Jan 08, 2025 | Team Udayavani |

ಬೆಂಗಳೂರು: 60 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮೇಲೆ ಮಂಗಳವಾರ ಮುಗಿಬಿದ್ದ ಆಡಳಿತ ಪಕ್ಷದ ನಾಯಕರು, ದಾಖಲೆ ರಹಿತ ಈ ಹೇಳಿಕೆ ಉದ್ಧಟತನದ ಪರಮಾವಧಿಯಾಗಿದೆ. ಸುಮ್ಮನೆ ಗಾಳಿಯಲ್ಲಿ ಗುಂಡುಹಾರಿಸುವುದು ಬೇಡ. ದಾಖಲೆ ಕೊಡಲಿ. ನಾವು ಅಂತಹವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಸವಾಲು ಹಾಕಿದ್ದಾರೆ.

Advertisement

ಸದಾಶಿವನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ| ಜಿ.ಪರಮೇಶ್ವರ್‌, ಸುಮ್ಮನೆ ರಾಜಕೀಯ ಆರೋಪ ಸರಿಯಲ್ಲ. ಯಾರು 60 ಪರ್ಸೆಂಟ್‌ ಕಮಿಷನ್‌ ತೆಗೆದುಕೊಂಡಿದ್ದಾರೆ ಅಂತ ನಿರ್ದಿಷ್ಟ ದಾಖಲೆ ಕೊಡಿ. ನಾವು ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಹಿಂದೆ ಗುತ್ತಿಗೆದಾರರ ಸಂಘ 40 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡಿದ್ದು, ಈಗ ಅದರ ಬಗ್ಗೆ ತನಿಖೆಗೆ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.

ಮಾಜಿ ಸಂಸದ ಡಿ.ಕೆ. ಸುರೇಶ್‌ ಮಾತನಾಡಿ, ವೀಕೆಂಡ್‌ ಇಲ್ಲಿಗೆ ಬಂದು ಆರೋಪ ಮಾಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಚುನಾವಣೆ ಇನ್ನು ಬಹಳ ದೂರವಿದೆ. ಈಗ ಆರೋಪ ಮಾಡುವುದು ಬೇಡ. ಚುನಾವಣೆ ಸಂದರ್ಭದಲ್ಲಿ ಆರೋಪ ಮಾಡಲಿ. ಕೇಂದ್ರ ಸರಕಾರದಲ್ಲಿರುವ ಅಧಿಕಾರ ಬಳಸಿಕೊಂಡು ರಾಜ್ಯಕ್ಕೆ ಯಾವ ರೀತಿ ಕೊಡುಗೆ ನೀಡಬಹುದು, ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಸಿಗಬೇಕಾದ ಪಾಲಿನ ಬಗ್ಗೆ, ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಪ್ರಧಾನಮಂತ್ರಿಗಳ ಮೇಲೆ ಒತ್ತಡ ಹಾಕಲಿ ಎಂದು ಎಚ್‌.ಡಿ. ಕುಮಾರಸ್ವಾಮಿಗೆ ಟಾಂಗ್‌ ಕೊಟ್ಟರು. ಸಚಿವ ಎಚ್‌.ಸಿ. ಮಹದೇವಪ್ಪ ಮಾತನಾಡಿ, ಸುಮ್ಮನೆ ಆರೋಪ ಮಾಡುವುದು ಬೇಡ. ಸಾಕ್ಷಿ-ಆಧಾರಗಳನ್ನು ಇಟ್ಟುಕೊಂಡು ಮಾತನಾಡಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next