Advertisement
ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮತದಾರರ ಮೇಲೆ ಒತ್ತಡ ಹೇರುವುದು, ಅಕ್ರಮ ಚಟುವಟಿಕೆಗಳನ್ನು ಪತ್ತೆಗೆ ಪಾಲಿಕೆ ಯ ವ್ಯಾಪ್ತಿಯಲ್ಲಿರುವ ಸಿಸಿ ಕ್ಯಾಮೆರಾಗಳನ್ನುಬಳಸಿಕೊಳ್ಳಲು ಆಯೋಗ ಯೋಜನೆ ರೂಪಿಸಿದೆ. ನಗರದಲ್ಲಿ ಸುಮಾರು 5 ಸಾವಿರ ಸಿಸಿ ಕ್ಯಾಮೆರಗಳಿವೆ ಎಂದು ಅಂದಾಜಿಸಲಾಗಿದೆ. ಆ ಪೈಕಿ ಪಾಲಿಕೆಯ 198 ವಾರ್ಡ್‌ಗಳಲ್ಲಿಯೇ 4 ಸಾವಿರ ಕ್ಯಾಮೆರಾಗಳಿದ್ದು, ಉಳಿದಂತೆ ಪ್ರಮುಖ ಜಂಕ್ಷನ್‌ಗಳು ಹಾಗೂ ರಸ್ತೆಗಳಲ್ಲಿ ಅಳವಡಿಸಿರುವ ಕ್ಯಾಮೆರಾಗಳ ಮೊರೆ ಹೋಗಲು ಆಯೋಗ ನಿರ್ಧರಿಸಿದ್ದು, ನಗರ ಪೊಲೀಸ್ ಹಾಗೂ ಪಾಲಿಕೆಯ ಸಿಬ್ಬಂದಿ ಕ್ಯಾಮೆರಾಗಳ ಮೇಲೆ ನಿಗಾವಹಿಸಲಿದ್ದಾರೆ.
ಸಹಯೋಗದಲ್ಲಿ ನಗರದಲ್ಲಿರುವ ಎಲ್ಲ ಸಿಸಿ ಕ್ಯಾಮೆರಾಗಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳಲು ನಿರ್ಧರಿಸಿದ್ದೇವೆ. ಇದರಿಂದಾಗಿ ಕಾನೂನು ಬಾಹಿರ ಚಟುವಟಿಕೆಗಳ ತಡೆಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.