Advertisement

ಕಮಿಷನ್‌ ಸರ್ಕಾರ: ಪ್ರಧಾನಿ ಹೇಳಿಕೆ ಸಮರ್ಥಿಸಿದ ಬಿಎಸ್‌ವೈ

06:10 AM Feb 06, 2018 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 10 ಪರ್ಸೆಂಟ್‌ ಕಮಿಷನ್‌ ಸರ್ಕಾರ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿರುವುದು ಸರಿಯಾಗಿಯೇ ಇದೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಈ ಸರ್ಕಾರ ಭ್ರಷ್ಟಾಚಾರದ ಎಲ್ಲಾ ದಾಖಲೆಗಳನ್ನೂ ಮುರಿದಿದೆ ಎಂದು ಆರೋಪಿಸಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರಧಾನಿ ಮೋದಿ ಅವರ ಹೇಳಿಕೆ ಕುರಿತಂತೆ ಖಾಸಗಿ ಸುದ್ದಿವಾಹಿನಿ ನಡೆಸಿದ ಸಮೀಕ್ಷೆ ವೇಳೆ ಶೇ. 73ಕ್ಕೂ ಹೆಚ್ಚು ಮಂದಿ ಸಿದ್ದರಾಮಯ್ಯ ಸರ್ಕಾರ ಕಮಿಷನ್‌ ಸರ್ಕಾರ ಎಂದು ಹೇಳಿದ್ದಾರೆ. ಪ್ರಧಾನಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳಿಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ ಎಂದು ಹೇಳಿದ್ದಾರೆ.

ಇನ್ನಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜನರಲ್ಲಿರುವ ಆಕ್ರೋಶ ಅರ್ಥಮಾಡಿಕೊಂಡು ಜವಾಬ್ದಾರಿಯಿಂದ ಮಾತನಾಡಲಿ. ಶೇ.20-30 ಕಮಿಷನ್‌ ನೀಡದೆ ಇಲ್ಲಿ ಯಾವ ಕೆಲಸವೂ ನಡೆಯುವುದಿಲ್ಲ. ಪ್ರಧಾನಿ ಮೋದಿಯವರು ಕನಿಷ್ಟ 10 ಪರ್ಸೆಂಟ್‌ ಕಮಿಷನ್‌ ಸರ್ಕಾರ ಎಂದು ಹೇಳಿದ್ದಾರೆ. ಜನ ಈ ಸರ್ಕಾರದ ಭ್ರಷ್ಟಾಚಾರದಿಂದ ರೋಸಿಹೋಗಿದ್ದು, ಬದಲಾವಣೆ ಬಯಸುತ್ತಿದ್ದಾರೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next