Advertisement
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಸಂಪುಟದಿಂದ ತಮ್ಮನ್ನು ಕೈಬಿಟ್ಟು, ಆರ್.ಶಂಕರ್‌ಗೆ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆ ಕುರಿತು ಏನೂ ಮಾತನಾಡುವುದಿಲ್ಲ. ಈ ವಿಷಯದಲ್ಲಿ ಹೈಕಮಾಂಡ್ ನಿರ್ಧಾರ ಅಂತಿಮ ಎಂದರು.
ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿದ ಎಚ್.ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ಅವರು ಭಾವನಾತ್ಮಕವಾಗಿ ಮುಖ್ಯಮಂತ್ರಿಗಳನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಅವರೆಲ್ಲರ ಬೆಂಬಲದಿಂದಲೇ ಪಕ್ಷ ಅಧಿಕಾರಕ್ಕೆ ಬಂದಿದೆ. ಯಾವುದೋ ಕಾರಣಕ್ಕೆ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ನಮಗೂ ಸ್ಥಾನ ಬೇಕು ಎಂದು ಅವರು ಅಪೇಕ್ಷೆ ಪಡುವುದರಲ್ಲಿ ತಪ್ಪೇನೂ ಇಲ್ಲ ಎಂದರು. ಮುಖ್ಯಮಂತ್ರಿಯವರಿಗೆ ಪರ್ಸನಲ್ ಪವರ್ ಮುಖ್ಯ. ರಾಜ್ಯದ ಬಗ್ಗೆ ಚಿಂತೆ ಇಲ್ಲ, ಸಂಪುಟ ವಿಸ್ತರಣೆ ಮಾಡುತ್ತಿಲ್ಲ ಎಂಬ ಸಿದ್ದರಾಮಯ್ಯ ಅವರ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ ಅವರು, “ವಿಪಕ್ಷ ನಾಯಕರಿಗೆ ನಮ್ಮನ್ನು ಟೀಕೆ ಮಾಡುವುದೇ ಕೆಲಸ. ಅದನ್ನು ಸಿದ್ದರಾಮಯ್ಯ ನಿಭಾಯಿಸುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.
Related Articles
Advertisement
ಒಂದು ವಾರದಲ್ಲಿ ಸಚಿವ ಸಂಪುಟ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಧನುರ್ಮಾಸ ಕಳೆದಿದೆ. ವರಿಷ್ಠರ ಜೊತೆಗೆ ಮಾತನಾಡುವುದಾಗಿ ಸ್ವತ: ಸಿಎಂ ಯಡಿಯೂರಪ್ಪ ಅವರೇ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಪರಮಾಧಿಕಾರ ಬಳಸಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಈ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ. ಉಪಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವ ಕುರಿತು ಮುಖ್ಯಮಂತ್ರಿಗಳೇ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.