Advertisement

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಬದ್ಧತೆ ಅಗತ್ಯ

05:02 PM Jun 13, 2017 | |

ಕಲಬುರಗಿ: ಬಾಲಕಾರ್ಮಿಕ ಪದ್ಧತಿಯನ್ನು ಬೇರು ಸಹಿತ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪಾಲಕರು ತಮ್ಮ 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಒದಗಿಸುವ ಸಂಕಲ್ಪ ಹಾಗೂ ಬದ್ಧತೆ ತೋರುವ ಮನಸ್ಸು ಮಾಡಿದಾಗ ಯಶಸ್ಸು ಗಳಿಸಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ವಿ. ಪಾಟೀಲ ಹೇಳಿದರು. 

Advertisement

ನಗರದ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಬಾಲಕಾರ್ಮಿಕ ನಿರ್ಮೂಲನಾ ಹಾಗೂ ಪುನರ್ವಸತಿ ಸಂಘ ಮತ್ತು ಮಕ್ಕಳ ಸಹಾಯವಾಣಿ-1098 ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಆಯೋಜಿಸಲಾಗಿದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಗ್ರಾಮೀಣ ಭಾಗದ ಜನರಿಗೆ ತಿಳಿವಳಿಕೆ ನೀಡುವ ಕಾರ್ಯವನ್ನು ಎಲ್ಲ ಇಲಾಖೆಗಳ ಅಧಿ ಕಾರಿಗಳು ಕೈಗೊಳ್ಳಬೇಕು ಎಂದು ಹೇಳಿದರು. ಬಾಲಕಾರ್ಮಿಕತೆಗೆ ಬಡತನ ಮತ್ತು ಅನಕ್ಷರತೆ ಮೂಲ ಕಾರಣವಾಗಿದೆ. ಇದೊಂದು ಅನಿಷ್ಠ ಪದ್ಧತಿಯಾಗಿ ರೂಪುಗೊಂಡಿದೆ. ಜಿಲ್ಲೆಯಲ್ಲಿರುವ ಎಲ್ಲ ಬಾಲ ಕಾರ್ಮಿಕರನ್ನು ಗುರುತಿಸಿ ಶಾಲೆಗಳಲ್ಲಿ ಶಿಕ್ಷಣ ನೀಡಿ ಮುಖ್ಯ ವಾಹಿನಿಗೆ ಕರೆತರಬೇಕು. 

ಬಾಲಕಿಯರ ರಕ್ಷಣೆ ಮಾಡುವುದು ಇಂದಿನ ತುರ್ತು ಅಗತ್ಯತೆಯಾಗಿದೆ ಎಂದು ಹೇಳಿದರು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅ ಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಮಾತನಾಡಿ, ಸಾಮಾಜಿಕ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿ ಗ್ರಾಮ ಮತ್ತು ತಾಂಡಾಗಳಲ್ಲಿ ಸಂವೇದನಾಶೀಲ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕಿಶೋರಿಯರಿಗೆ ನ್ಯಾಯ ಕಲ್ಪಿಸುವ ಕಾರ್ಯ ಕೈಗೊಳ್ಳಬೇಕು.

ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಹೆಚ್ಚು ಶ್ರಮ ಪಡುವುದರೊಂದಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್‌. ಕೆ. ಹಿರೇಮಠ ಮಾತನಾಡಿ, ಬಾಲಕಾರ್ಮಿಕತೆ ಒಂದು ಜ್ವಲಂತ ಸಮಸ್ಯೆಯಾಗಿದೆ. ಎಲ್ಲ ಮಕ್ಕಳಿಗೆ ಬಾಲ್ಯತನ ಅತೀ ಮುಖ್ಯ. ಮೃದು ಸ್ವಭಾವದ ಮಕ್ಕಳ ಬಾಲ್ಯತನ ಕಳೆದು ಹೋಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಬಾಲಕಾರ್ಮಿಕರ ರಕ್ಷಣೆಗೆ ಪಣ ತೊಡಗಬೇಕು ಎಂದು ಹೇಳಿದರು. 

Advertisement

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಧುತ್ತರಗಾಂವ ಮಾತನಾಡಿ, ಕಲಬುರಗಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯವನ್ನಾಗಿಸುವ ನಿಟ್ಟಿನಲ್ಲಿ ಎಲ್ಲ ಸಂಘ ಸಂಸ್ಥೆಗಳು, ಸಮಾಜ ಕಾರ್ಯಕರ್ತರು ಶ್ರಮಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಧಿಕಾರಿಗಳು ಹಾಗೂ ರಾಷ್ಟ್ರೀಯ ಬಾಲಕಾರ್ಮಿಕ ನಿರ್ಮೂಲನೆ ಹಾಗೂ ಪುನರ್ವಸತಿ ಸಂಘದ ಅಧ್ಯಕ್ಷ ಉಜ್ವಲಕುಮಾರ ಘೋಷ್‌ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಆರ್‌. ಮಾಣಿಕ್ಯ, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಎನ್‌. ಶಶಿಕುಮಾರ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್‌ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಜಿ. ಚಂದ್ರಕಾಂತ, ಕಾರ್ಖಾನೆ ಮತ್ತು ಬಾಯ್ಲರ್‌ಗಳ ಇಲಾಖೆ ಉಪನಿರ್ದೇಶಕ ಪಾರ್ಥಸಾರಥಿ,

ದಾಲಮಿಲ್‌ ಅಸೋಸಿಯೇಶನ್‌ ಅಧ್ಯಕ್ಷ ಚಿದಂಬರರಾವ ಪಾಟೀಲ ಮರಗುತ್ತಿ, ಇಟ್ಟಿಗೆ ಭಟ್ಟಿ ಉದ್ದಿಮೆಗಳ ಸಂಘದ ಅಧ್ಯಕ್ಷ ಶಿವಾನಂದ ಪದ್ಮಾಜಿ, ಆಲ್‌ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಪ್ರಭು ಯಳಸಂಗಿ, ಕಟ್ಟಡ ಕಾರ್ಮಿಕ ಕೇಂದ್ರ ವಲಯದ ಜಿಲ್ಲಾಧ್ಯಕ್ಷ ಶಂಕರ ಕಟ್ಟಿಸಂಗಾವಿ, ಜಿಲ್ಲಾ ಸಲಹಾ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯ ಸುರೇಶ ಬಡಿಗೇರ ಪಾಲ್ಗೊಂಡಿದ್ದರು. 

ಕಲಬುರಗಿ ಚೈಲ್ಡ್‌ಲೈನ್‌ ನೋಡಲ್‌ ಕೇಂದ್ರದ ನಿರ್ದೇಶಕ ಡಾ| ಲಿಂಗರಾಜ ಕೋಣಿನ್‌ ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆ ಕುರಿತು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ವಿಠuಲ ಚಿಕಣಿ ಬಾಲಕಾರ್ಮಿಕ ದುಷ್ಪರಿಣಾಮಗಳು ಮತ್ತು ಬಾಲಕಾರ್ಮಿಕರ ಪುನರ್ವಸತಿ ವ್ಯವಸ್ಥೆ ಕುರಿತು ಹಾಗೂ ಡಾನ್‌ ಬಾಸ್ಕೋ ನಿರ್ದೇಶಕ ಫಾದರ್‌ ಸಜ್ಜಿತ್‌ ಜಾರ್ಜ್‌ ಮಕ್ಕಳ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. 

ಇದೇ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧಿಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಅಧ್ಯಕ್ಷ ಬಿ.ವ್ಹಿ. ಪಾಟೀಲ ಪ್ರತಿಜ್ಞಾ ವಿ ಧಿಯನ್ನು ಬೋಧಿಸಿದರು. ಬಾಲಕಾರ್ಮಿಕ ಮಕ್ಕಳ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಬಹುಮಾನ ವಿತರಿಸಲಾಯಿತು. ಸರ್ಕಾರಿ ಬಾಲಕ,ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿಗಳಿಗೆ ಪಠ್ಯ  ಸಾಮಗ್ರಿಗಳನ್ನು ವಿತರಿಸಲಾಯಿತು. 

ಕಲಬುರಗಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ವೆಂಕಟೇಶ ಶಿಂದಿಹಟ್ಟಿ ಸ್ವಾಗತಿಸಿದರು. ಆಶಾ ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋ ಧಿ ದಿನಾಚರಣೆ ಅಂಗವಾಗಿ ಸ್ವಯಂ ಸೇವಾ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳಿಂದ ಏರ್ಪಡಿಸಲಾಗಿದ್ದ ಜಾಥಾ ಜಿಲ್ಲಾ ಧಿಕಾರಿಗಳ ಕಚೇರಿಯಿಂದ ಪ್ರಾರಂಭವಾಗಿ ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊನೆಗೊಂಡಿತು.  

Advertisement

Udayavani is now on Telegram. Click here to join our channel and stay updated with the latest news.

Next