Advertisement
ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಸಮರ್ಪಕ ಕೌಶಲ್ಯದೊಂದಿಗೆ ರಾಜ್ಯಮಟ್ಟದಲ್ಲಷ್ಟೇ ಅಲ್ಲದೆ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಅನುವಾಗುವಂತೆ ಸಜ್ಜುಗೊಳಿಸುವುದು ಅನಿವಾರ್ಯವಾಗಿದೆ ಎಂದರು.
Related Articles
Advertisement
• 2018ನೇ ಸಾಲಿನಲ್ಲಿ ಕರ್ನಾಟಕವು ಬಂಡವಾಳ ಆಕರ್ಷಿಸುವುದರಲ್ಲಿ ರಾಷ್ಟ್ರದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ. ಕೈಗಾರಿಕಾ ನೀತಿ 2014-19ರ ಅಡಿಯಲ್ಲಿ 3.49 ಲಕ್ಷ ಕೋಟಿ ರೂ.ಬಂಡವಾಳ ಹೂಡಿಕೆ ಹೊಂದಿರುವ ಮತ್ತು 10.28 ಲಕ್ಷ ಜನರಿಗೆ ಉದ್ಯೋಗಾವಕಾಶವನ್ನು ಸೃಜಿಸುವ ಸಾಮರ್ಥ್ಯವುಳ್ಳ 1.958 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
• 2019ನೇ ಸಾಲಿನಲ್ಲಿ ಕಲಬುರಗಿ ಮತ್ತು ಬೀದರ್ ವಿಮಾನ ನಿಲ್ದಾಣಗಳು ಕಾರ್ಯಾ ಚರಣೆ ಪ್ರಾರಂಭಿಸಲಿವೆ. ರಾಜ್ಯದಲ್ಲಿ ರಸ್ತೆ ಸಂಪರ್ಕ ಸುಧಾರಣೆಗಾಗಿ 7800 ಕಿ.ಮೀ., ರಾಜ್ಯ ಹೆದ್ದಾರಿ ಮತ್ತು ಪ್ರಧಾನ ಜಿಲ್ಲಾ ರಸ್ತೆಗಳ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಕೈಗೆತ್ತಿಕೊಳ್ಳಲು ವರದಿ ಸಿದ್ಧಪಡಿಸಲಾಗುತ್ತಿದೆ.
• ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್‌ಲೈನ್ ಸ್ವಯಂ ಚಾಲಿತ ಕಟ್ಟಡ ನಕ್ಷೆ ಅನುಮೋದನಾ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದನ್ನು ಶೀಘ್ರದಲ್ಲಿಯೇ ರಾಜ್ಯದ ಎಲ್ಲ ನಗರ ಸಂಸ್ಥೆಗಳಿಗೆ ವಿಸ್ತರಿಸಲಾಗುವುದು. ಐದು ಸ್ಮಾರ್ಟ್‌ಸಿಟಿಗಳಲ್ಲಿ ಎಲ್ಲ ಆನ್‌ಲೈನ್ ಸೇವೆ ಏಕೀಕೃತಗೊಳಿಸಲು ಕಮ್ಯಾಂಡ್ ಮತ್ತು ಕಂಟ್ರೋಲ್ ಕೇಂದ್ರಗಳ ಸ್ಥಾಪನೆ ಕುರಿತ ಕಾರ್ಯ ಪ್ರಾರಂಭಿಸಲಾಗಿದೆ.
• ರಾಜ್ಯದಲ್ಲಿ 156 ತಾಲೂಕು ಬರಪೀಡಿತ ವಾಗಿದ್ದು, ಈ ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆ, ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗಿದೆ. 8.11 ಲಕ್ಷ ಮೇವು ಕಿಟ್ ವಿತರಿಸಿ 30 ಲಕ್ಷ ಟನ್ ಮೇವು ಉತ್ಪಾದನೆ ನಿರೀಕ್ಷಿಸಲಾಗಿದೆ. ಉದ್ಯೋಗ ಖಾತರಿ ಯೋಜನೆಯಡಿ 18.56 ಲಕ್ಷ ಕುಟುಂಬ ಗಳಿಗೆ ಉದ್ಯೋಗ ಕಲ್ಪಿಸಲಾಗಿದೆ.
• ಸಾಲಮನ್ನಾ ಯೋಜನೆಯಡಿ ಜನವರಿ ಅಂತ್ಯದವರೆಗೆ 3.28 ಲಕ್ಷ ರೈತರ 1611 ಕೋಟಿ ರೂ.ಬೆಳೆ ಸಾಲ ಮನ್ನಾ ಮಾಡಲಾಗಿದೆ.
• ಸಕ್ಕರೆ ಕಾರ್ಖಾನೆಗಳು 2018ನೇ ಏಪ್ರಿಲ್ ತಿಂಗಳಲ್ಲಿ ರೈತರಿಗೆ ಕೊಡಬೇಕಾಗಿದ್ದ 2135 ಕೋಟಿ ರೂ.ಅಧಿಕ ಬಾಕಿ ಮೊತ್ತವು ಜನವರಿ ಅಂತ್ಯಕ್ಕೆ 5 ಕೋಟಿ ರೂ.ಗೆ ಇಳಿಕೆಯಾಗು ವಂತೆ ನೋಡಿಕೊಳ್ಳಲಾಗಿದೆ.
• ಮೇಕೆದಾಟು ಬ್ಯಾಲೆನ್ಸಿಂಗ್ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಜಲ ಆಯೋಗ ಒಪ್ಪಿಗೆ ನೀಡಿದೆ.
• ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾ ಟಕ ಯೋಜನೆಯಡಿ ಜನವರಿ ಅಂತ್ಯದ ವರೆಗೆ 1,22,822 ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಗ್ರಾಮೀಣ ಪ್ರದೇಶ ಗಳಲ್ಲಿ ಉತ್ತಮ ಪ್ರಾಥಮಿಕ ಆರೋಗ್ಯ ಪಾಲನಾ ಸೇವೆ ಒದಗಿಸಲು ಆರೋಗ್ಯ ಉಪ ಕೇಂದ್ರಗಳನ್ನು ಮೇಲ್ದರ್ಜೆಗೇರಿಸ ಲಾಗುವುದು.
• ಬಡ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಗದಗ, ಕೊಪ್ಪಳ, ಚಾಮರಾಜನಗರ, ಹಾಸನದಲ್ಲಿ 450 ಹಾಸಿಗೆಗಳ ಹೊಸ ಆಸ್ಪತ್ರೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.
• ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಒದಗಿಸಲು ಬಡವರ ಬಂಧು ಜಾರಿಗೊಳಿಸ ಲಾಗಿದೆ. ಹಾಲು ಉತ್ಪಾದಕರ ಖಾತೆಯ ಪ್ರೋತ್ಸಾಹಧನ, ‘ಕ್ಷೀರಸಿರಿ’ ಯಂತಹ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ನೇರವಾಗಿ ವರ್ಗಾಯಿಸಲು ಆಧಾರ್ ಆಧಾರಿತ ಅಪ್ಲಿಕೇಷನ್ ಅಭಿವೃದ್ಧಿ ಗೊಳಿಸಲಾಗಿದೆ.
• ಸರ್ಕಾರವು ವಿಶೇಷ ಅಭಿವೃದ್ಧಿ ಯೋಜನೆ ಗಾಗಿ 3007 ಕೋಟಿ ರೂ.ಹೈ-ಕ ಪ್ರದೇಶದ ಅಭಿವೃದ್ಧಿಗೆ 1000 ಕೋಟಿ ರೂ.ಒದಗಿಸಲಾಗಿದೆ.
ಉಪ ನಗರ ರೈಲು ಸಂಪರ್ಕ
ಬೆಂಗಳೂರು ನಗರದಲ್ಲಿ ಸುಸ್ಥಿರ ನಗರ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಉಪನಗರ ರೈಲು ಸಂಪರ್ಕ ಸೌಲಭ್ಯ ಹೆಚ್ಚಿಸಲು ರೈಲ್ವೆ ಇಲಾಖೆಯೊಂದಿಗೆ ವಿಶೇಷ ಉದ್ದೇಶ ವಾಹಕ ಸ್ಥಾಪಿಸಲು ಉದ್ದೇಶಿಸಲಾಗಿದೆ. ನಾಗವಾರ ಮೆಟ್ರೋ ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಹಂತ-2 ಬಿ ಯನ್ನು ಆದ್ಯತೆಯ ಮೆಲೆ ಕೈಗೆತ್ತಿಕೊಳ್ಳಲಾಗುತ್ತಿದೆ. ಬೆಂಗಳೂರು ಕೇಂದ್ರ ಭಾಗದಲ್ಲಿ ಚತುರ ಸಂಚಾರಿ ನಿರ್ವಹಣಾ ವ್ಯವಸ್ಥೆ ಅನುಷ್ಠಾನಗೊಳಿಸಲಾಗುತ್ತಿದೆ ಎಮದು ರಾಜ್ಯಪಾಲರು ಹೇಳಿದರು.