Advertisement
ಶುಕ್ರವಾರ ಶಿವಮೊಗ್ಗ ಸಮೀಪದ ಹುಣಸೋಡು ಗ್ರಾಮದಲ್ಲಿ ಕರ್ಕಿ ಶ್ರೀಮಠದ ಸಹಕಾರದೊಂದಿಗೆ ನಡೆಯುತ್ತಿರುವ ಜ್ಞಾನೇಶ್ವರಿ ಗೋಶಾಲೆಗೆ ಭೇಟಿ ನೀಡಿ, ಗೋಪೂಜೆ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿ, ಗೋಹತ್ಯೆ ನಿಷೇಧ ಕಾನೂನು ಜಾರಿಯಾದ ನಂತರ ಕಸಾಯಿಖಾನೆಗೆ ಹೋಗುತ್ತಿರುವ ಗೋವುಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದ್ದು, ಗೋಶಾಲೆಗಳಿಗೆ ಬರುತ್ತಿರುವ ಜಾನುವಾರುಗಳಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದರು.
Related Articles
Advertisement
ಚಿತ್ರನಟ ಸುದೀಪ್ ಅವರನ್ನು ಪಶುಪಾಲನಾ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಲಾಗಿದೆ. ಇದೇ ಸಂದರ್ಭದಲ್ಲಿ ನಟ ಸುದೀಪ್ ಅವರು 31 ಗೋವುಗಳನ್ನು ದತ್ತು ಸ್ವೀಕರಿಸಿದ್ದಾರೆ. ಅಲ್ಲದೇ ತಾವು 31 ಗೋವುಗಳನ್ನು ದತ್ತು ಪಡೆದಿದ್ದು, ಮುಖ್ಯಮಂತ್ರಿಗಳು 11ಗೋವುಗಳನ್ನು ದತ್ತು ಪಡೆದು ತಮ್ಮ ಜನ್ಮ ದಿನ ಆಚರಿಸಿಕೊಂಡಿದ್ದಾರೆ. ಹೀಗೆ ಸಾರ್ವಜನಿಕರೂ ಕೂಡ ಇದೇ ಮಾದರಿಯಲ್ಲಿ ಗೋವುಗಳನ್ನು ದತ್ತು ಪಡೆದು ಗೋವುಗಳ ರಕ್ಷಣೆಗೆ ಮುಂದಾಗಬೇಕು. ರಾಜ್ಯದ ಎಲ್ಲಾ ಚುನಾಯಿತ ಪ್ರತಿನಿಧಿ ಗಳು ತಮ್ಮ ಕಾರ್ಯಕ್ಷೇತ್ರದ ಒಂದು ಗೋಶಾಲೆಯನ್ನು ದತ್ತು ಪಡೆದು ನಿರ್ವಹಿಸಲು ಮನವಿ ಮಾಡಲಾಗುವುದು ಎಂದರು.
ಪಶುಪಾಲನಾ ಇಲಾಖೆಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಇದೆ. ಈಗಾಗಲೇ 400 ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆಯ್ಕೆಗೆ ಸಂಬಂಧಿ ಸಿದಂತೆ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿದೆ. ಪ್ರಕರಣ ಇತ್ಯರ್ಥಗೊಂಡ ನಂತರ ನೇಮಕಗೊಂಡ ಅಭ್ಯರ್ಥಿಗಳಿಗೆ ಕರ್ತವ್ಯದ ಮೇಲೆ ಹಾಜರಾಗಲು ಸೂಚನಾಪತ್ರ ರವಾನಿಸಲಾಗುವುದು.
ಯಾವುದೇ ಫಲಾಪೇಕ್ಷೆಯಿಲ್ಲದೇ ಗೋವುಗಳನ್ನು ಸಂರಕ್ಷಿಸುತ್ತಿರುವ, ಗೋಶಾಲೆಗಳನ್ನು ನಡೆಸುತ್ತಿರುವ ಸಂಘ-ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದರು. ಶಿವಮೊಗ್ಗದ ಸುರಭಿ ಗೋಶಾಲೆಯ ಮುಖ್ಯಸ್ಥ ನಟರಾಜ್ ಭಾಗ್ವತ್, ಮಹಾವೀರ ಗೋಶಾಲೆಯ ಮುಖ್ಯಸ್ಥ ಬಾಬುಲಾಲ್ ಜೈನ್, ಜ್ಞಾನೇಶ್ವರಿ ಗೋಶಾಲೆಯ ಮುಖ್ಯಸ್ಥ ಚಂದ್ರಹಾಸ ರಾಯ್ಕರ್ ಹಾಗೂ ಸೋಮೇಶ್ ಮತ್ತಿತರರು ಉಪಸ್ಥಿತರಿದ್ದರು.