Advertisement

ಮಾದಿಗರಿಗೆ ಸಾಮಾಜಿಕ ನ್ಯಾಯ ಒದಗಿಸಲು ಬದ್ಧ: ಆಂಜನೇಯ

06:35 AM Mar 26, 2018 | Team Udayavani |

ಹೊಸಪೇಟೆ:  ರಾಜ್ಯ ಸರಕಾರ ಮಾದಿಗ ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಬದ್ಧವಾಗಿದ್ದು, ಒಳ ಮೀಸಲು ಕಲ್ಪಿಸಲು ಸಂಪುಟ ಉಪ ಸಮಿತಿ ರಚಿಸಲಾಗಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬರಲಿದ್ದು, ಪರಿಶಿಷ್ಟ ಜಾತಿಯಲ್ಲಿರುವ ಎಲ್ಲಾ ಪಂಗಡಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಒಳಮೀಸಲು ಜಾರಿಗೊಳಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ತಿಳಿಸಿದರು.

Advertisement

ನಗರದಲ್ಲಿ ನಿರ್ಮಾಣಗೊಂಡಿರುವ ಶ್ರೀಮಾತಂಗ ಮುನಿ ಆಶ್ರಮದ ಉದ್ಘಾಟನೆ ಹಾಗೂ ಶ್ರೀಮಾತಂಗ ಭವನ ನಿರ್ಮಾಣದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾದಿಗ ಸಮಾಜಕ್ಕೆ ಮೂರು ಅಭಿವೃದ್ಧಿ ನಿಗಮಗಳನ್ನು ದಯಪಾಲಿಸಿದ್ದಾರೆ. ಮಾದಿಗ ಸಮುದಾಯಕ್ಕಾಗಿ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮ, ಪೌರ ಕಾರ್ಮಿಕರ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next