Advertisement

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

07:21 PM Dec 25, 2024 | Team Udayavani |

ರಬಕವಿ-ಬನಹಟ್ಟಿ: ಕಾನೂನು ಮತ್ತು ಸುವ್ಯವಸ್ಥೆಗಾಗಿ ಬನಹಟ್ಟಿ ಪೊಲೀಸ್ ಠಾಣೆಯ ಪಿಎಸ್‌ಐ ಅವರಿಗೆ ವಾಹನದ ಅಗತ್ಯವಿತ್ತು. ವಿಧಾನ ಪರಿಷತ್ ಶಾಸಕರ ಅನುದಾನದಲ್ಲಿ ರೂ. 10 ಲಕ್ಷ ವೆಚ್ಚದಲ್ಲಿ ವಾಹನವನ್ನು ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ತಿಳಿಸಿದರು.

Advertisement

ಅವರು ಬುಧವಾರ ಇಲ್ಲಿನ ಪೊಲೀಸ್ ಠಾಣೆಯಲ್ಲಿ ನೂತನ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ಈಗಾಗಲೇ ನಗರದ ಬಹಳಷ್ಟು ಕಡೆಗಳಲ್ಲಿ ಸಿ ಸಿ ಕ್ಯಾಮರಾಗಳನ್ನು ಆವಳಡಿಸಲಾಗಿದೆ. ಆದರೆ ಅವುಗಳ ನಿರ್ವಹಣೆಯನ್ನು ಸರಿಯಾಗಿ ಮಾಡಬೇಕು. ಮುಂದಿನ ದಿನಗಳಲ್ಲಿ ಸ್ಥಳೀಯ ಠಾಣೆಗೆ ಬೇಕಾಗುವ ತಾಂತ್ರಿಕ ಸೌಲಭ್ಯಗಳನ್ನು ಮತ್ತು ಪೊಲೀಸ್ ರಿಗೆ ಇರುವ ಸಮಸ್ಯೆಗಳ ಕುರಿತು ನನ್ನ ಗಮನಕ್ಕೆ ತಂದರೆ ಸರ್ಕಾರಕ್ಕೆ ತಿಳಿಸಿ ಅವುಗಳನ್ನು ನೆರವೇರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವುದಾಗಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ತಿಳಿಸಿದರು.

ಸಿಪಿಐ ಸಂಜೀವ ಬಳಗಾರ, ಪಿಎಸ್‌ಐ ಶಾಂತಾ ಹಳ್ಳಿ, ಎಎಸ್‌ಐ ಬಾಬಾನಗರ, ಮುಖಂಡರಾದ ದುಂಡಪ್ಪ ಕರಿಗಾರ, ಚಿದಾನಂದ ಗಾಳಿ, ದಾನಪ್ಪ ಹುಲಜತ್ತಿ, ಬಸವರಾಜ ಗುಡೋಡಗಿ ಸೇರಿದಂತೆ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next