ಹೊಳಲ್ಕೆರೆ: ಸರಕಾರಿ ಶಾಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಸರಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಪೂರಕ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ, ಶಾಸಕ ಎಂ. ಚಂದ್ರಪ್ಪ ಹೇಳಿದರು.
ತಾಲೂಕಿನ ಉಗಣೆಕಟ್ಟೆ ವಡ್ಡರಹಟ್ಟಿ ಸರಕಾರಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿರುವ ಎಲ್ಲಾ ಸರಕಾರಿ ಶಾಲೆಗಳಿಗೆ ಕೊಠಡಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಶಿಕ್ಷಕರು ಸರಕಾರಿ ಸೌಲಭ್ಯಗಳನ್ನು ಮಕ್ಕಳಿಗೆ ಕಲ್ಪಿಸಿಕೊಡುವುದರ ಮೂಲಕ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಶ್ರಮಿಸಬೇಕೆಂದರು.
ಇದನ್ನೂ ಓದಿ:ಆಡುಮಲ್ಲೇಶ್ವರ ಕಿರು ಮೃಗಾಲಯ ಅಭಿವೃದ್ಧಿಗೆ ಕ್ರಮ
ಸರಕಾರಿ ಶಾಲೆ ಎಂದರೆ ಅದು ಬಡವರಿಗೆ ಮಾತ್ರ ಎನ್ನುವಂತಹ ಮನಃ ಸ್ಥಿತಿಯಲ್ಲಿ ಪೋಷಕರಿದ್ದಾರೆ. ದೇಶದ ಮಹಾನ್ ಸಾಧಕರು, ವ್ಯಕ್ತಿಗಳೆಲ್ಲರೂ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಸರಕಾರಿ ಶಾಲೆಯಲ್ಲಿ ಶಿಕ್ಷಣ ಮಾತ್ರ ಕಲಿಸುವುದಿಲ್ಲ, ಬದುಕಿನ ದಾರಿಯನ್ನು ತೋರಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ತಾಪಂ ಸದಸ್ಯ ಜಯಪ್ಪ ಹಾಗೂ ಗ್ರಾಪಂ ಸದಸ್ಯರು ಬಿಜೆಪಿಗೆ ಸೇರ್ಪಡೆಯಾದರು.