ಅನುದಾನ ಒದಗಿಸಿದೆ. ಸರ್ಕಾರ ತಾಲೂಕಿಗೆ ಮೂರು ಮೊರಾರ್ಜಿ ವಸತಿ ಶಾಲೆಗಳನ್ನು ಮಂಜೂರಿಗೊಳಿಸಿದೆ. ತಾಲೂಕಿನ ಕೋಳಕೂರ, ಅರಳಗುಂಡಗಿ ಹಾಗೂ ಯಡ್ರಾಮಿಯಲ್ಲಿ ನೂತನ ವಸತಿ ಶಾಲೆಗಳು ಪ್ರಾರಂಭವಾಗಿದೆ ಎಂದು ಹೇಳಿದರು. ಪಟ್ಟಣದಲ್ಲಿ ಟೌನ್ ಹಾಲ್, ಶಾಪಿಂಗ್ ಮಹಲ್, ತರಕಾರಿ ಮಾರುಕಟ್ಟೆ, ಕೆರೆ ನಿರ್ಮಾಣ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಯತ್ನ ಮಾಡಲಾಗುತ್ತಿದೆ. ಬರುವ ಒಂದು ವರ್ಷದ ಅವಧಿಯೊಳಗೆ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡುತ್ತೇನೆ ಎಂದರು. ಇದಕ್ಕೂ ಮುನ್ನ ತಹಶೀಲ್ದಾರ ಯಲ್ಲಪ್ಪ ಸುಬೇದಾರ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ಹೋರಾಟಗಾರರಾದ ಶಂಕ್ರಪ್ಪ ಸಾಹು ಹುಗ್ಗಿ , ಮಡಿವಾಳಪ್ಪ ನೆಲೋಗಿ ಅವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು. ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಮಲ್ಲಣ್ಣ ಅವುಂಟಿ, ಉಪಾಧ್ಯಕ್ಷೆ ರೇಣುಕಾ ಶರಣು ಗುತ್ತೇದಾರ, ತಾಪಂ ಅಧ್ಯಕ್ಷೆ ಚಂದಮ್ಮ ಸಂಗಣ್ಣ, ಜಿಪಂ ಸದಸ್ಯರಾದ ರೇವಣಸಿದ್ದಪ್ಪ ಸಂಕಾಲಿ, ಟಿಎಚ್‌ಒ ಡಾ| ಸಿದ್ಧು ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಲಿಂಗರಾಜ ಮೂಲಿಮನಿ, ಎಪಿಎಂಸಿ ಅಧ್ಯಕ್ಷ ಮಡಿವಾಳಪ್ಪಗೌಡ ಮಾಗಣಗೇರಾ, ಪ್ರಭು ಮಾನೆ, ಬ್ಲಾಕ್
ಕಾಂಗ್ರೆಸ್ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ ಹಾಗೂ ವಿದ್ಯಾರ್ಥಿಗಳು ಇದ್ದರು. ಮೊರಾರ್ಜಿ ವಸತಿ ಶಾಲೆ ಮಕ್ಕಳು ರೈತ ಗೀತೆ, ನಾಡಗೀತೆ, ರಾಷ್ಟ್ರಗೀತೆ ಹಾಡಿದರು.
Advertisement