ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳ ಹುದ್ದೆಗೆ ಅರ್ಹರ ಹೆಸರು ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರ ಶೋಧನಾ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ತಕರಾರು ಅರ್ಜಿ ಸಂಬಂಧ ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿಗೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.
ಕರ್ನಾಟಕ ವಿವಿ ಕಾಯ್ದೆ 2000ರ ಸೆಕ್ಷನ್ 14(3) ಅನುಸಾರ ವಿವಿಗಳ ಕುಲಪತಿಗಳ ಆಯ್ಕೆಗಾಗಿ ರಚಿಸಲಾಗುವ ಶೋಧನಾ ಸಮಿತಿಯಲ್ಲಿ ವಿವಿಯೊಂದಿಗೆ ಸಂಬಂಧವಿರುವ ಯಾವುದೇ ವ್ಯಕ್ತಿಗಳನ್ನು ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡುವಂತಿಲ್ಲ. ಈ ನಿಯಮವನ್ನು ಉಲ್ಲಂ ಸಿ ಶೋಧನಾ ಸಮಿತಿ ರಚಿಸಲಾಗಿದೆ ಎಂದು ಆಕ್ಷೇಪಿಸಿ ಬೆಂಗಳೂರಿನ ಡಾ.ಬಿ.ಆರ್.ಶ್ರೀನಿವಾಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎ.ಎಸ್ ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.
ಸರ್ಕಾರದ ಪರ ವಕೀಲ ಕಿರಣ್ ಕುಮಾರ್ ವಾದ ಮಂಡಿಸಿ, ಯಾವ ವಿವಿಗೆ ಕುಲಪತಿಗಳನ್ನು ಆಯ್ಕೆ ಮಾಡಲಾಗುತ್ತದೋ ಆ ವಿವಿಯೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳನ್ನು ಶೋಧನಾ ಸಮಿತಿಗೆ ನಾಮನಿರ್ದೇಶನ ಮಾಡುವಂತಿಲ್ಲ ಎಂಬ ನಿಯಮವಿದೆ.
ಆದರೆ ಬೆಂಗಳೂರು ವಿವಿ ಕುಲಪತಿಗಳ ಆಯ್ಕೆಗೆ ರಚಿಸಿರುವ ಶೋಧನಾ ಸಮಿತಿಯಲ್ಲಿರುವವರು ಬೇರೆ ವಿವಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. ವಾದ, ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಯಾಗಿರುವ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಪಿಐಎಲ್ ವಜಾ: ಈ ಮಧ್ಯೆ ಸತ್ಯಶೋಧನಾ ಸಮಿತಿ ಆದೇಶ ರದ್ದು ಕೋರಿ ಸಲ್ಲಿಸಿದ್ದ ಮತ್ತೂಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ.ಎಸ್.ಕೆ.ಮುಖರ್ಜಿ ಹಾಗೂ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠ ವಜಾಗೊಳಿಸಿದೆ. ಕುಲಪತಿಗಳ ಆಯ್ಕೆ ಸಂಬಂಧ ರಚಿಸಲಾಗಿದ್ದ ಶೋಧನಾ ಸಮಿತಿ ಈಗಾಗಲೇ ಹೆಸರುಗಳನ್ನು ಶಿಫಾರಸು ಮಾಡಿದೆ. ಹೀಗಾಗಿ ಈ ಅರ್ಜಿ ವಿಚಾರಣೆ ಮಾನ್ಯತೆ ಕಳೆದುಕೊಂಡಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ರಾಜ್ಯ ಸರ್ಕಾರ ಬೆಂಗಳೂರು ವಿವಿ ಕುಲಪತಿಗಳ ಹುದ್ದೆಗೆ ಅರ್ಹರ ಹೆಸರು ಶಿಫಾರಸು ಮಾಡಲು ಶೋಧನಾ ಸಮಿತಿ ರಚಿಸಿರುವುದು ನಿಯಮಬಾಹಿರವಾಗಿದೆ. ಕರ್ನಾಟಕ ವಿಶ್ವವಿದ್ಯಾನಿಲಯ ಕಾಯ್ದೆಯ ನಿಯಮಗಳನ್ನು ಉಲ್ಲಂ ಸಿ ರಚಿಸಿರುವ ಸಮಿತಿ ರಚನೆಯನ್ನು ಅಸಿಂಧುಗೊಳಿಸುವಂತೆ ಕೋರಿ ಕೆ.ಪಧನಾಭ ಅರ್ಜಿ ಸಲ್ಲಿಸಿದ್ದರು.