Advertisement

ಅನ್ಯ ಪಕ್ಷದಿಂದ ಬರುವವರನ್ನು ಸೇರಿಸಿಕೊಳ್ಳಲು ಸಮಿತಿ ರಚನೆ

07:14 AM Jun 06, 2020 | Lakshmi GovindaRaj |

ಬೆಂಗಳೂರು: ಪಕ್ಷದಿಂದ ಬೇರೆ ಪಕ್ಷಕ್ಕೆ ಹೋಗಿರುವ ಅನೇಕರು ಮತ್ತೆ ಕಾಂಗ್ರೆಸ್‌ ಗೆ ಮರಳಲು ಇಚ್ಛಿಸಿದ್ದಾರೆ. ಅವರನ್ನು ಸೇರಿಸಿಕೊಳ್ಳುವ ಕುರಿತು ಪರಾಮರ್ಶೆ ನಡೆಸಲು ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಈ ಸಮಿತಿ  ಶಿಫಾರಸು ಮಾಡುವವರನ್ನು ಪಕ್ಷದ ನಾಯಕರು ಹಾಗೂ ಸ್ಥಳೀಯ ಕಾರ್ಯಕರ್ತರ ಜತೆ ಚರ್ಚಿಸಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Advertisement

ವಿಶ್ವ ಪರಿಸರ ದಿನ ಅಂಗವಾಗಿ ಶುಕ್ರವಾರ ರೇಸ್‌  ಕೋರ್ಸ್‌ ರಸ್ತೆಯ ಕಾಂಗ್ರೆಸ್‌ ಭವನದಲ್ಲಿ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು. ಕೇವಲ ಅಧಿಕಾರದ ಆಸೆಯಿಂದ ಪಕ್ಷಕ್ಕೆ ಮರಳುವವರ ಅಗತ್ಯ ನಮಗಿಲ್ಲ. ಪಕ್ಷದ ಸಿದಾಟಛಿಂತ, ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ನಾಯಕತ್ವದ ಮೇಲೆ  ನಂಬಿಕೆ ಇಟ್ಟು, ತಾಲೂಕು ಮಟ್ಟದಲ್ಲಿ ಕಾರ್ಯಕರ್ತರ ಜತೆ ಬೆರೆತು ಕೆಲಸ ಮಾಡಲು ಸಿದವಿದ್ದರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಹೇಳಿದರು.

ಕಾಂಗ್ರೆಸ್‌ನಿಂದ ಬೇರೆ ಪಕ್ಷಕ್ಕೆ ಹೋಗಿರುವವರಲ್ಲಿ ಅನೇಕರು ಮತ್ತೆ ಕಾಂಗ್ರೆಸ್‌ ಗೆ ಮರಳಲು ಇಚ್ಚಿಸಿದ್ದಾರೆ. ಅಂತಹ ನಾಯಕರನ್ನು ಏಕಪಕ್ಷೀಯ ನಿರ್ಧಾರದಿಂದ ಪಕ್ಷಕ್ಕೆ ಸೇರಿಸಿಕೊಳ್ಳಲು ನಾನು ಸಿದಟಛಿವಿಲ್ಲ. ಈ ವಿಚಾರದಲ್ಲಿ ಎಲ್ಲ  ನಾಯಕರು ಹಾಗೂ ಸ್ಥಳೀಯ ನಾಯಕರ ಜತೆ ಚರ್ಚೆ ನಡೆಸಬೇಕಿದೆ. ಹೀಗಾಗಿ, ಸಮಿತಿ ರಚಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next