Advertisement

ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಬದ್ಧ: ಜೋಶಿ

06:19 PM Apr 23, 2022 | Team Udayavani |

ಮಾನ್ವಿ: ಕೇಂದ್ರ ಮತ್ತು ರಾಜ್ಯದಿಂದ ಹಿಂದುಳಿದ ಜಿಲ್ಲೆಗಳಾದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗೆ ಸಾಕಷ್ಟು ಅನುದಾನ ಹಾಗೂ ಅಭಿವೃದ್ಧಿ ಕಾರ್ಯಕ್ರಮ ಕೈಗೊಳ್ಳುವ ಮೂಲಕ ಅಭಿವೃದ್ಧಿಗೆ ಶ್ರಮಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಾಹರಗಳ ಹಾಗೂ ಕಲಿದ್ದಲು ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

Advertisement

ಪಟ್ಟಣದಲ್ಲಿ ಶುಕ್ರವಾರ ಸಂಜೆ ಕಾರ್ಯಕರ್ತರನ್ನು ಭೇಟಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದಕ್ಕೆ ಇಂದಿನಿಂದಲೇ ತಾಲೂಕು ಮಟ್ಟದಲ್ಲಿ ಪಕ್ಷ ಹಾಗೂ ಕಾರ್ಯಕರ್ತರನ್ನು ಸಂಘಟಿಸಬೇಕು. ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಅಗತ್ಯವಿದೆ ಎಂದು ತಿಳಿಸಿದರು.

ಪಟ್ಟಣಕ್ಕೆ ಆಗಮಿಸಿದ ಕೇಂದ್ರ ಸಚಿವರನ್ನು ಮಾಜಿ ಶಾಸಕ ಗಂಗಾಧರ ನಾಯಕ ಹಾಗೂ ತಾಲೂಕು ಬಿಜೆಪಿ ಮಂಡಲ ವತಿಯಿಂದ ಸ್ವಾಗತಿ ಸನ್ಮಾನಿಸಲಾಯಿತು. ಕೊಪ್ಪಳ ಸಂಸದ ಕರಡಿ ಸಂಗಣ್ಣ , ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ, ತಾಲೂಕು ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ, ನಗರ ಮಂಡಲ ಅಧ್ಯಕ್ಷ ಶ್ರೀಕಾಂತಗೂಳಿ, ಮುಖಂಡರಾದ ಶರಣನಗೌಡ ನಕ್ಕುಂದಿ, ತಿಮ್ಮರೆಡ್ಡಿ ಭೋಗವತಿ, ಮಲ್ಲಿಕಾರ್ಜುನ ಸಂಗಪೂರ, ಗೋಪಾಲನಾಯಕ, ಶಿವಲಿಂಗಯ್ಯ, ಜಯರಾಜ, ಕೆ.ಬಸವಂತಪ್ಪ ಸೇರಿದಂತೆ ಪಕ್ಷದ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next