Advertisement

ಕಾಮನ್ವೆಲ್ತ್‌ ಚೆಸ್‌ ಟೂರ್ನಿ: ಶ್ರೀಯಾನಾ ಮಲ್ಯ ಚಿನ್ನದ ಸಾಧನೆ

06:00 AM Jul 07, 2018 | Team Udayavani |

ಮಂಗಳೂರು: ಹೊಸದಿಲ್ಲಿಯಲ್ಲಿ ನಡೆದ ಕಾಮನ್ವೆಲ್ತ್‌ ಚೆಸ್‌ ಚಾಂಪಿಯನ್‌ಶಿಪ್‌ನ 8 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮಂಗಳೂರಿನ ಬಿಜೈ ಲೂರ್ಡ್ಸ್‌ ಸೆಂಟ್ರಲ್‌ ಸ್ಕೂಲಿನ 3ನೇ ತರಗತಿ ವಿದ್ಯಾರ್ಥಿನಿ ಶ್ರೀಯಾನಾ ಮಲ್ಯ ಚಿನ್ನದ ಪದಕ ಜಯಿಸಿದ್ದಾರೆ. ಈ ಸಾಧನೆಯಿಂದ ಅವರು ಸ್ಪೇನ್‌ನಲ್ಲಿ ನಡೆಯುವ ವರ್ಲ್ಡ್ ಕೆಡೆಟ್‌ ಚೆಸ್‌ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ. ಮಂಗಳೂರಿನ ಗಹನ್‌ ಎಂ.ಜಿ. ಮತ್ತು ಸಮೀರ್‌ ಘೊಟಾನೆ ಅವರಿಂದ ಚೆಸ್‌ ತರಬೇತಿ ಪಡೆಯುತ್ತಿದ್ದಾರೆ.

Advertisement

ಕಾಮನ್ವೆಲ್ತ್‌ ಚೆಸ್‌ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟು 15 ವಿಭಾಗಗಳಿದ್ದವು. ಇದರಲ್ಲಿ ಪಾಕಿಸ್ಥಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಜಿಂಬಾಬ್ವೆ, ಇಂಗ್ಲೆಂಡ್‌, ಆಸ್ಟ್ರೇಲಿಯ, ಕೀನ್ಯ ಸೇರಿದಂತೆ 53 ದೇಶಗಳ 742 ಮಂದಿ ಸ್ಪರ್ಧಿಗಳು ಭಾಗವಹಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next