ಬರ್ಮಿಂಗ್ ಹ್ಯಾಮ್ : ಇಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ಪುರುಷರ 61 ಕೆಜಿ ವಿಭಾಗದಲ್ಲಿ ಕನ್ನಡಿಗ , ಕುಂದಾಪುರ ಮೂಲದ ವೇಟ್‌ಲಿಫ್ಟರ್ ಗುರುರಾಜ ಪೂಜಾರಿ ಶನಿವಾರ ಕಂಚಿನ ಪದಕ ಗೆದ್ದಿದ್ದಾರೆ.
ಈ ಪದಕದೊಂದಿಗೆ ಭಾರತಕ್ಕೆ ಎರಡನೇ ಪದಕವನ್ನು ಗುರುರಾಜ ನೀಡಿದ್ದಾರೆ. ಗುರುರಾಜ ಒಟ್ಟು 269 ಕೆಜಿ ಎತ್ತುವ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದರು.
ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ
ಗುರುರಾಜ ಪೂಜಾರಿ ಅವರ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದು, ಅತ್ಯತ್ತಮ ಪ್ರದರ್ಶನ ತೋರಿದ ಅವರ ಕ್ರೀಡಾ ಪಯಣದಲ್ಲಿ ಇನ್ನೂ ಹಲವು ಮೈಲಿಗಲ್ಲುಗಳು ಮೂಡಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
55 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಗಾರ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಲಭ್ಯವಾಗಿತ್ತು.
ಈ ಬಾರಿ ವೇಟ್‌ಲಿಫ್ಟರ್‌ಗಳು ಅತ್ಯುತ್ತಮ ಪ್ರದರ್ಶನ ತೋರಲಿದ್ದಾರೆ ಎಂದು ವೇಟ್‌ಲಿಫ್ಟಿಂಗ್ ಕೋಚ್ ವಿಜಯ್ ಶರ್ಮಾ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.