ಜೈಪುರ್: ಈದ್ಗಾ ಸಮೀಪ ಅಂಗಡಿಗಳನ್ನು ನಿರ್ಮಾಣ ಮಾಡುತ್ತಿರುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಜನರನ್ನು ಬಂಧಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:Hassan; ಸ್ಕೂಟರ್ ಗೆ ಬೊಲೆರೋ ಪಿಕಪ್ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು
ಈದ್ಗಾ ಸಮೀಪ ಅಂಗಡಿಗಳನ್ನು ನಿರ್ಮಾಣ ಮಾಡುತ್ತಿರುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ, ಕಲ್ಲುತೂರಾಟ, ಬೆಂಕಿಹಚ್ಚಿರುವ ಘಟನೆ ನಡೆದಿದೆ. ಇದು ಕಳೆದ ಎರಡು ದಿನಗಳಿಂದ ಮುಂದುವರಿದಿರುವುದಾಗಿ ವರದಿ ವಿವರಿಸಿದೆ.
ಉದ್ಗಿಗ್ನ ಶಮನಗೊಳಿಸಲು ಆರಂಭಿಕವಾಗಿ ಪೊಲೀಸರು ಮಧ್ಯಪ್ರವೇಶಿಸಿದ್ದರು. ಆದರೆ ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದ್ದ ಸಂದರ್ಭದಲ್ಲಿ ಕಲ್ಲುತೂರಾಟ ನಡೆದಿದ್ದು, ಕೆಲವು ಅಂಗಡಿ-ಮುಂಗಟ್ಟುಗಳಿಗೆ ಬೆಂಕಿ ಹಚ್ಚಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಪೊಲೀಸರು ಲಾಠಿಚಾರ್ಜ್ ಹಾಗೂ ಅಶ್ರುವಾಯು ಸಿಡಿಸುವ ಮೂಲಕ ಗುಂಪನ್ನು ಚದುರಿಸಿದ್ದರು. ಈ ವೇಳೆ ಇಬ್ಬರು ಪೊಲೀಸರು ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.
ನೆರದಿದ್ದ ಜನರ ಗುಂಪನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್, ಚಾರ್ಜ್ ನಡೆಸಿ ನಿಯಂತ್ರಣಕ್ಕೆ ತಂದಿದ್ದರು. ಹಿಂಸಾಚಾರದಲ್ಲಿ ತೊಡಗಿದ್ದ ಹಲವು ಶಂಕಿತರನ್ನು ಬಂಧಿಸಲಾಗಿದೆ ಎಂದು ವರದಿ ಹೇಳಿದೆ.