Advertisement

Communal Clash: ಈದ್ಗಾ ಬಳಿ ಕಟ್ಟಡ ನಿರ್ಮಾಣ; ರಾಜಸ್ಥಾನದಲ್ಲಿ ಭುಗಿಲೆದ್ದ ಹಿಂಸಾಚಾರ!

04:29 PM Jun 22, 2024 | Team Udayavani |

ಜೈಪುರ್:‌ ಈದ್ಗಾ ಸಮೀಪ ಅಂಗಡಿಗಳನ್ನು ನಿರ್ಮಾಣ ಮಾಡುತ್ತಿರುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಜನರನ್ನು ಬಂಧಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:Hassan; ಸ್ಕೂಟರ್ ಗೆ ಬೊಲೆರೋ ಪಿಕಪ್ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈದ್ಗಾ ಸಮೀಪ ಅಂಗಡಿಗಳನ್ನು ನಿರ್ಮಾಣ ಮಾಡುತ್ತಿರುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ, ಕಲ್ಲುತೂರಾಟ, ಬೆಂಕಿಹಚ್ಚಿರುವ ಘಟನೆ ನಡೆದಿದೆ. ಇದು ಕಳೆದ ಎರಡು ದಿನಗಳಿಂದ ಮುಂದುವರಿದಿರುವುದಾಗಿ ವರದಿ ವಿವರಿಸಿದೆ.

ಉದ್ಗಿಗ್ನ ಶಮನಗೊಳಿಸಲು ಆರಂಭಿಕವಾಗಿ ಪೊಲೀಸರು ಮಧ್ಯಪ್ರವೇಶಿಸಿದ್ದರು. ಆದರೆ ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದ್ದ ಸಂದರ್ಭದಲ್ಲಿ ಕಲ್ಲುತೂರಾಟ ನಡೆದಿದ್ದು, ಕೆಲವು ಅಂಗಡಿ-ಮುಂಗಟ್ಟುಗಳಿಗೆ ಬೆಂಕಿ ಹಚ್ಚಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಪೊಲೀಸರು ಲಾಠಿಚಾರ್ಜ್‌ ಹಾಗೂ ಅಶ್ರುವಾಯು ಸಿಡಿಸುವ ಮೂಲಕ ಗುಂಪನ್ನು ಚದುರಿಸಿದ್ದರು. ಈ ವೇಳೆ ಇಬ್ಬರು ಪೊಲೀಸರು ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.

Advertisement

ನೆರದಿದ್ದ ಜನರ ಗುಂಪನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್‌, ಚಾರ್ಜ್‌ ನಡೆಸಿ ನಿಯಂತ್ರಣಕ್ಕೆ ತಂದಿದ್ದರು. ಹಿಂಸಾಚಾರದಲ್ಲಿ ತೊಡಗಿದ್ದ ಹಲವು ಶಂಕಿತರನ್ನು ಬಂಧಿಸಲಾಗಿದೆ ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next