Advertisement
ಅವರು ರವಿವಾರ ಶ್ರೀ ಒಡಿಯೂರು ರಥೋತ್ಸವ- ತುಳುನಾಡ ಜಾತ್ರೆಯ ಸಂದರ್ಭ ಒಡಿಯೂರು ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ 21ನೇ ತುಳು ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
Related Articles
Advertisement
ಪುತ್ತೂರು ಒಡಿಯೂರು ಶ್ರೀ ಷಷ್ಟ್ಯಬ್ದ ಸಂಭ್ರಮ ಸಮಿತಿ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು, ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ| ತುಕಾರಾಮ ಪೂಜಾರಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎ. ಸುರೇಶ್ ರೈ ಮಾತನಾಡಿದರು.
ತುಳು ಸಾಹಿತ್ಯ ಸಮ್ಮೇಳನ ಸಮಿತಿ ಸಂಚಾಲಕ ಡಾ| ವಸಂತ ಕುಮಾರ್ ಪೆರ್ಲ ಸ್ವಾಗತಿಸಿದರು. ಯಶವಂತ ವಿ.ಸಮ್ಮೇಳನ ಅಧ್ಯಕ್ಷರನ್ನು ಪರಿಚಯಿಸಿದರು. ಒಡಿಯೂರು ಶ್ರೀ ಗುರುದೇವ ಐ.ಟಿ.ಐ. ಪ್ರಾಚಾರ್ಯ ಕರುಣಾಕರ ಎನ್. ಬಿ. ವಂದಿಸಿದರು. ದೇವಿಪ್ರಸಾದ್ ಶೆಟ್ಟಿ ಬೆಜ್ಜ ಕಾರ್ಯಕ್ರಮ ನಿರೂಪಿಸಿದರು. ಬೆಳಗ್ಗೆ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆ ನಡೆಯಿತು.
ತುಳು ತುಲಿಪು – ಪರಪೋಕು ಕರಿನ ಒರಿನ ಸಂಸ್ಕೃತಿತುಳು ತುಲಿಪು-ಪರಪೋಕು ಕರಿನ ಒರಿನ ಸಂಸ್ಕೃತಿಯ ಬಗ್ಗೆ ವಿಚಾರಗೋಷ್ಠಿ ನಡೆಯಿತು. ಕರಿನ ಸಂಸ್ಕೃತಿ ಬಗ್ಗೆ ಎರ್ಮಾಳ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಡಾ| ಜ್ಯೋತಿ ಚೇಳಾçರು ಮಾತನಾಡಿದರು. ಅಖೀಲ ಭಾರತ ತುಳು ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ಒರಿನ ಸಂಸ್ಕೃತಿ ಬಗ್ಗೆ ಮಾತನಾಡಿದರು. ಯೋಗೀಶ್ ರಾವ್ ಚಿಗುರುಪಾದೆ, ವಿದ್ಯಾಶ್ರೀ ಎಸ್. ಉಳ್ಳಾಲ ಸ್ವರಚಿತ ಕವಿತೆ ವಾಚಿಸಿದರು. ರವಿರಾಜ್ ಶೆಟ್ಟಿ ಒಡಿಯೂರು ರಾಗ ಸಂಯೋಜನೆ ಮಾಡಿದರು. ಜೈಗುರುದೇವ ಕಲಾಕೇಂದ್ರದ ಸದಸ್ಯರು ಪ್ರಸ್ತುತಪಡಿಸಿದರು. ಒಡಿಯೂರು ಜೈ ಗುರುದೇವ ಕಲಾಕೇಂದ್ರದ ಅಧ್ಯಕ್ಷ ಸುಬ್ರಹ್ಮಣ್ಯ ಒಡಿಯೂರು ಸ್ವಾಗತಿಸಿದರು. ರಾಧಾಕೃಷ್ಣ ಕನ್ಯಾನ ವಂದಿಸಿದರು. ವಿಜಯಾ ಶೆಟ್ಟಿ ಸಾಲೆತ್ತೂರು ಕಾರ್ಯಕ್ರಮ ನಿರೂಪಿಸಿದರು.