Advertisement

ಗ್ರಾಮೀಣ ಭಾಗದಲ್ಲಿ ಸಮುದಾಯ ಭವನ

05:24 PM Feb 02, 2018 | Team Udayavani |

ರಾಯಚೂರು: ಮಡಿವಾಳ ಸಮಾಜದವವರು ಇಷ್ಟೊಂದು ಸಂಖ್ಯೆಯಲ್ಲಿ ಸೇರಿ ಜಯಂತ್ಯುತ್ಸವ ಆಚರಿಸುವುದು ಶ್ಲಾಘನೀಯ. ಮಡಿವಾಳ ಸಮಾಜಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ಭವನ ನಿರ್ಮಿಸುವುದಾಗಿ ಶಾಸಕ ತಿಪ್ಪರಾಜ ಹವಾಲ್ದಾರ್‌ ಭರವಸೆ ನೀಡಿದರು.

Advertisement

ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗುರುವಾರ ನಗರದ ರಂಗಮಂದಿರದಲ್ಲಿ  –ಆಯೋಜಿಸಿದ್ದ ಶರಣ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದಿಂದ ಜಯಂತಿ ಆಚರಿಸುತ್ತಿರುವುದು ಉತ್ತಮ ಕಾರ್ಯ. ಸಮಾಜಕ್ಕೆ ಬೇಕಾದ ನೆರವು ನೀಡಲು ಸಿದ್ಧ ಎಂದರು.

ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಮಾತನಾಡಿ, ಮಡಿವಾಳ ಮಾಚಿದೇವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ನೇರ ನಿಷ್ಠುರ ವಚನಗಳನ್ನು ರಚಿಸಿ ಸಮಾಜ ತಿದ್ದುವ ಕೆಲಸ ಮಾಡಿದರು. ಯಾವುದೇ ಸಮಾಜದ ಮಹಾನ್‌ ಪುರುಷರ ಜಯಂತಿ ಆಚರಣೆಯಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಮಹಿಳೆಯರು ಭಾಗವಹಿಸಿರಲಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌.ಬೋಸರಾಜ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ 33 ಗಣ್ಯರ ಜಯಂತಿ ಆಚರಿಸುತ್ತಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಶ್ರೀ ಮಡಿವಾಳ ಮಾಚಿದೇವರ ಸಮುದಾಯ ಭವನಕ್ಕೆ ಈಗಾಗಲೇ 46 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಒಂದು ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ ತಾವು 10 ಲಕ್ಷ ರೂ. ಅನುದಾನ ನೀಡುವುದಾಗಿ ಹೇಳಿದರು.

ಸಾಹಿತಿ ವೀರ ಹನುಮಾನ್‌ ಅವರು ಮಾಚಿದೇವರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮಡಿವಾಳ ಸಮಾಜದ ಪತ್ರಕರ್ತ ಶಿವಪ್ಪ ಮಡಿವಾಳರನ್ನು ಸಮಾಜದಿಂದ ಸನ್ಮಾನಿಸಲಾಯಿತು.

Advertisement

ಎಪಿಎಂಸಿ ಅಧ್ಯಕ್ಷ ಅಮರೇಗೌಡ ಹಂಚಿನಾಳ, ಆರ್‌ ಡಿಎ ಅಧ್ಯಕ್ಷ ಅಬ್ದುಲ್‌ ಕರೀಂ, ಮಡಿವಾಳ ಸಮಾಜ ಅಧ್ಯಕ್ಷ ಜಿ.ಸುರೇಶ, ಹುಸೇನಪ್ಪ, ನಗರಸಭೆ ಸದಸ್ಯರಾದ ನರಸಪ್ಪ ಯಕ್ಲಾಸಪುರ, ಮಹಾಲಿಂಗ ರಾಂಪುರ, ಆಂಜನೇಯ ಯಕ್ಲಾಸಪುರ, ವಿನಯಕುಮಾರ, ರಾಮು ಗಿಲ್ಲೇರಿ, ವೀರೇಶ, ನರಸಪ್ಪ ಜೇಗರಕಲ್‌ ಇತರರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ನೀಲಮ್ಮ
ಸ್ವಾಗತಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next