Advertisement

ಸಿಎಂ ಸೂಚಿಸುವ ಕ್ಷೇತ್ರ ದಿಂದ ಸ್ಪರ್ಧೆ: ನಟ ಶಶಿಕುಮಾರ್‌

11:36 AM Feb 14, 2018 | Team Udayavani |

ಚಳ್ಳಕೆರೆ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದನಾಗಿ ಕಾರ್ಯನಿರ್ವಹಿಸಿದ್ದು, ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸುವ ಅಪೇಕ್ಷೆ ಹೊಂದಿದ್ದೇನೆ ಎಂದು ಮಾಜಿ ಸಂಸದ, ಚಿತ್ರನಟ ಶಶಿಕುಮಾರ್‌ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ಕ್ಷೇತ್ರಗಳಿಂದ ಕಣಕ್ಕಿಳಿಯುವಂತೆ ಕಾಂಗ್ರೆಸ್‌ ಕಾರ್ಯಕರ್ತರ ಒತ್ತಡವಿದೆ.

Advertisement

ಬಜೆಟ್‌ ಅಧಿವೇಶನದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸುವ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದರು. ಮೊಳಕಾಲ್ಮೂರು ಮತ್ತು ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ನಾಲ್ಕು ಬಾರಿ ಪ್ರವಾಸ ಕೈಗೊಂಡಿದ್ದೇನೆ. ಈ ಎರಡೂ ಕ್ಷೇತ್ರಗಳ ಕಾರ್ಯಕರ್ತರ ಮತ್ತು ಮುಖಂಡರ ಮಾರ್ಗದರ್ಶನ ಪಡೆಯುತ್ತಿದ್ದೇನೆ. ನನ್ನ ಸ್ಪರ್ಧೆ ವಿಷಯದಲ್ಲಿ ಪಕ್ಷದ ನಿರ್ಧಾರವೇ ಅಂತಿಮ. ಎರಡು ಕ್ಷೇತ್ರಗಳಲ್ಲಿ ಒಂದರಲ್ಲಿ ಸ್ಪರ್ಧಿಸಲು ಖಂಡಿತವಾಗಿಯೂ ಅವಕಾಶ ದೊರೆಯುತ್ತದೆ ಎಂಬ ವಿಶ್ವಾಸವಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next